alex Certify
ಕನ್ನಡ ದುನಿಯಾ       Mobile App
       

Kannada Duniya

ಸಂಕಷ್ಟದಲ್ಲಿ KKR ತಂಡದ ಮಾಲೀಕ ಶಾರುಖ್ ಖಾನ್

kkr-sruk-kna

ನವದೆಹಲಿ: ಬಾಲಿವುಡ್ ನಟ ಶಾರುಖ್ ಖಾನ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರು ಜುಲೈ 23 ರೊಳಗೆ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗಬೇಕಿದೆ.

ಇಂಡಿಯನ್ ಪ್ರೀಮಿಯರ್ ಲೀಗ್(ಐ.ಪಿ.ಎಲ್.) ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್(ಕೆ.ಕೆ.ಆರ್.) ತಂಡದ ಮಾಲೀಕರಾಗಿರುವ ಶಾರುಖ್ ಖಾನ್ ಅವರಿಗೆ ಜಾರಿ ನಿರ್ದೇಶನಾಲಯ(ಇ.ಡಿ.) ನೋಟಿಸ್ ನೀಡಿದೆ.

ಕೆ.ಕೆ.ಆರ್. ತಂಡದಲ್ಲಿ ವಿದೇಶಿ ವಿನಿಮಯ ಕಾಯ್ದೆ ಉಲ್ಲಂಘಿಸಿ ಅಕ್ರಮವಾಗಿ ಹೂಡಿಕೆ ಮಾಡಿದ ಆರೋಪದ ಮೇಲೆ ಇ.ಡಿ. ಸಮನ್ಸ್ ಜಾರಿಗೊಳಿಸಿದ್ದು, ಜುಲೈ 23 ರೊಳಗೆ ಖುದ್ದು ಹಾಜರಿಗೆ ಸೂಚಿಸಲಾಗಿದೆ.

ಶಾರುಖ್ ಖಾನ್ ಅವರ ರೆಡ್ ಚಿಲ್ಲೀಸ್ ಎಂಟರ್ ಟೈನ್ ಮೆಂಟ್ ಮಾಲೀಕತ್ವದ ಕೆ.ಕೆ.ಆರ್. ಸ್ಪೋರ್ಟ್ ಲಿಮಿಟೆಡ್ ಷೇರುಗಳ ಮಾರಾಟದಲ್ಲಿ ಮಾರಿಷಸ್ ಮೂಲದ ಕಂಪನಿಯೊಂದಿಗೆ ವ್ಯವಹಾರ ನಡೆಸಲಾಗಿದೆ ಎನ್ನಲಾಗಿದ್ದು, ಈ ಪ್ರಕರಣದ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...