alex Certify
ಕನ್ನಡ ದುನಿಯಾ       Mobile App
       

Kannada Duniya

ಟೀಂ ಇಂಡಿಯಾ ವಿರುದ್ಧದ ಪ್ರಥಮ ಟೆಸ್ಟ್ ನಲ್ಲಿ ಇಂಗ್ಲೆಂಡ್ ಗೆ ಜಯ

ಎಡ್ಜ್ ಬಾಸ್ಟನ್ ನಲ್ಲಿ ನಡೆದ ಮೂರು ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಇಂಗ್ಲೆಂಡ್ ತಂಡ 31 ರನ್ ಗಳ ಅಂತರದಲ್ಲಿ ಜಯ ಸಾಧಿಸಿದೆ.

ಮೊದಲ ಇನ್ನಿಂಗ್ಸ್ ನಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡ 287 ರನ್ ಗೆ ಆಲೌಟ್ ಆಗಿತ್ತು. ಬಳಿಕ ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ಆಕರ್ಷಕ ಶತಕದ ನೆರವಿನಿಂದ 274 ರನ್ ಗಳಿಸಿ ಆಲೌಟ್ ಆಗಿತ್ತು.

ದ್ವಿತೀಯ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ ತಂಡ 180 ರನ್ ಗೆ ಆಲೌಟ್ ಆಗಿದ್ದು, ಗೆಲುವಿಗೆ ಟೀಂ ಇಂಡಿಯಾ 194 ರನ್ ಗಳಿಸಬೇಕಾಗಿತ್ತು. ಆದರೆ 162 ರನ್ ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡ ಟೀಂ ಇಂಡಿಯಾ 31 ರನ್ ಗಳ ಅಂತರದಿಂದ ಪರಾಭವ ಕಂಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...