alex Certify
ಕನ್ನಡ ದುನಿಯಾ       Mobile App
       

Kannada Duniya

ವಿಶ್ವಕಪ್ ಗೆ ಹೀಗಿದೆ ವಿರಾಟ್ ಕೊಹ್ಲಿ ತಯಾರಿ

virat-koli

ದಾಂಬುಲಾ: ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿರುವ ಟೀಂ ಇಂಡಿಯಾ, ಏಕದಿನ ಸರಣಿಯ ಮೊದಲ ಪಂದ್ಯವನ್ನು 9 ವಿಕೆಟ್ ಅಂತರದಿಂದ ಭರ್ಜರಿಯಾಗಿ ಜಯಿಸಿದೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ತಂಡದಲ್ಲಿ ಹಲವು ಬದಲಾವಣೆಯನ್ನು ಮಾಡುವುದಾಗಿ ತಿಳಿಸಿದ್ದಾರೆ.

ಮುಂದಿನ ವಿಶ್ವಕಪ್ ಗೆ ಸಮರ್ಥ ತಂಡವನ್ನು ನಾವು ಕಟ್ಟಬೇಕಿದೆ. ಇದಕ್ಕಾಗಿ ಹಲವಾರು ಬದಲಾವಣೆಗಳನ್ನು ಮಾಡಲಾಗುವುದು. ಈ ಪ್ರಯೋಗದಲ್ಲಿ ಕೆಲವು ಪಂದ್ಯಗಳು ಕೈಜಾರಬಹುದಾಗಿದೆ. ಆದರೆ, ಶ್ರೇಷ್ಠವಾದ ತಂಡವನ್ನು ಕಟ್ಟಲು ಪ್ರಯೋಗ ಮಾಡಲೇಬೇಕಿದೆ ಎಂದು ಹೇಳಿದ್ದಾರೆ.

ಮುಂದಿನ ವಿಶ್ವಕಪ್ ಗುರಿಯಾಗಿಸಿಕೊಂಡು ನಮ್ಮ ಯೋಜನೆ ರೂಪಿಸಿ, ಅದನ್ನು ಕಾರ್ಯರೂಪಕ್ಕೆ ತರುತ್ತೇವೆ. ಇದಕ್ಕಾಗಿ ತಂಡದಲ್ಲಿ ಹಲವು ಬದಲಾವಣೆ ಮಾಡಲಾಗುವುದು ಎಂದಿದ್ದಾರೆ.

ತಂಡದಲ್ಲಿ ಎಲ್ಲರೂ ಉತ್ತಮ ಪ್ರದರ್ಶನ ನೀಡಬಲ್ಲವರಾಗಿದ್ದಾರೆ. ಮುಂದಿನ ಏಕದಿನ ವಿಶ್ವಕಪ್ ಜಯಿಸಲು ನಾವು ಸಜ್ಜಾಗಬೇಕಿದೆ. ಈಗಿನಿಂದಲೇ ತಯಾರಿ, ಬದಲಾವಣೆ, ಪ್ರಯೋಗ ನಡೆದಲ್ಲಿ ಉತ್ತಮವಾದ ತಂಡವನ್ನು ಕಟ್ಟಲು ಸಾಧ್ಯವಿದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...