alex Certify
ಕನ್ನಡ ದುನಿಯಾ       Mobile App
       

Kannada Duniya

ಕೊಹ್ಲಿಯನ್ನೇ ಹೋಲುತ್ತಿದೆ ಅಭಿಮಾನಿಯ ಕಟ್ಟಿಂಗ್..!

kohli face in cuttingಭಾರತದಲ್ಲಿ ಕ್ರಿಕೆಟ್ ಕೇವಲ ಕ್ರೀಡೆಯಾಗಿ ಉಳಿದಿಲ್ಲ. ಅದನ್ನು ಒಂದು ಧರ್ಮದಂತೆ ಅಭಿಮಾನಿಗಳು ಆರಾಧಿಸುತ್ತಾರೆ. ಖ್ಯಾತ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರನ್ನು ‘ಕ್ರಿಕೆಟ್ ದೇವರು’ ಎಂದೇ ಕರೆಯಲಾಗುತ್ತದೆ. ತಮ್ಮ ನೆಚ್ಚಿನ ಆಟಗಾರರನ್ನು ಅನುಕರಿಸಲು ಅಭಿಮಾನಿಗಳು ಮುಂದಾಗುತ್ತಾರೆ.

ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗಿರುವ ವಿರಾಟ್ ಕೊಹ್ಲಿ ತಮ್ಮ ಫಾರ್ಮ್ ನಿಂದಾಗಿ ಕ್ರಿಕೆಟ್ ಅಭಿಮಾನಿಗಳ ಆರಾಧ್ಯ ದೈವವಾಗಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ 10 ಮಿಲಿಯನ್ ಮಂದಿ ಫಾಲೋವರ್ಸ್ ಗಳನ್ನು ವಿರಾಟ್ ಕೊಹ್ಲಿ ಹೊಂದಿದ್ದಾರೆ.

ಈಗಾಗಲೇ ಹಲವು ದಾಖಲೆಗಳನ್ನು ಮಾಡಿರುವ ವಿರಾಟ್ ಕೊಹ್ಲಿ, ಐಪಿಎಲ್ ನ ಒಂದೇ ಸರಣಿಯಲ್ಲಿ 1,000 ಪೂರೈಸಿದ ಮೊದಲ ಆಟಗಾರನೆಂಬ ಕೀರ್ತಿಗೆ ಪಾತ್ರರಾಗಲು ಕೇವಲ 81 ರನ್ ಬಾಕಿ ಇದೆ. ಈಗಾಗಲೇ 919 ರನ್ ಗಳಿಸಿರುವ ವಿರಾಟ್ ಕೊಹ್ಲಿ, ಇಂದು ನಡೆಯುವ ಐಪಿಎಲ್ ಪಂದ್ಯದಲ್ಲಿ 1,000 ರನ್ ಗಳ ದಾಖಲೆ ನಿರ್ಮಿಸುತ್ತಾರಾ ಎಂಬ ಕುತೂಹಲ ಮೂಡಿದೆ.

ಈ ಮಧ್ಯೆ ವಿರಾಟ್ ಕೊಹ್ಲಿಯವರ ಕಟ್ಟಾ ಅಭಿಮಾನಿಯೊಬ್ಬ ವಿರಾಟ್ ಕೊಹ್ಲಿ ಪ್ರತಿರೂಪ ಕಾಣುವಂತೆ ತನ್ನ ಹೇರ್ ಕಟ್ ಮಾಡಿಸಿಕೊಂಡು ಅಭಿಮಾನ ಮೆರೆದಿದ್ದಾನೆ. ಹಕೀಂ ಮಹಾತೋ ಎಂಬ ಈ ಅಭಿಮಾನಿಯ ಹೇರ್ ಕಟ್ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...