alex Certify
ಕನ್ನಡ ದುನಿಯಾ       Mobile App
       

Kannada Duniya

ಸಾಕ್ಷಿ ಜೊತೆ ಸೆಲ್ಫಿ ತೆಗೆದುಕೊಳ್ಳಲು ಬಂದ ಅಭಿಮಾನಿಗೆ ಆಗಿದ್ದೇನು?

ಮಂಗಳವಾರ ವಾಂಖೆಡೆ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಅಬ್ಬರಿಸಿದೆ. ಎಂ.ಎಸ್.ಧೋನಿ ಪತ್ನಿ ಸಾಕ್ಷಿ ಮೈದಾನಕ್ಕೆ ಬಂದು ಪಂದ್ಯವನ್ನು ಎಂಜಾಯ್ ಮಾಡಿದ್ದಾರೆ. ಈ ಮಧ್ಯೆ ಸಾಕ್ಷಿ ವಿಡಿಯೋವೊಂದು ವೈರಲ್ ಆಗಿದೆ.

ಪಂದ್ಯ ಮುಗಿಯುತ್ತಿದ್ದಂತೆ ಸಾಕ್ಷಿ ಮೈದಾನದಿಂದ ಹೊರಗೆ ಹೊರಟಿದ್ದಾರೆ. ಈ ವೇಳೆ ಅಲ್ಲಿಗೆ ಬಂದ ಅಭಿಮಾನಿಯೊಬ್ಬ ಸಾಕ್ಷಿ ಜೊತೆ ಸೆಲ್ಫಿ ತೆಗೆಯಲು ಮುಂದಾಗಿದ್ದಾರೆ. ತಕ್ಷಣ ಎಚ್ಚೆತ್ತ ಭದ್ರತಾ ಸಿಬ್ಬಂದಿ ಅಭಿಮಾನಿ ಮೊಬೈಲ್ ಮೇಲೆ ಕೈ ಇಟ್ಟು ಪಕ್ಕಕ್ಕೆ ನೂಕಿದ್ದಾರೆ.

ಈ ವಿಡಿಯೋ ಇನ್ಸ್ಟ್ರಾಗ್ರಾಮ್ ನಲ್ಲಿ ವೈರಲ್ ಆಗಿದೆ. ಇದು ಮೊದಲಲ್ಲ. ಈ ಹಿಂದೆ ಕೂಡ ಅನೇಕ ಅಭಿಮಾನಿಗಳು ಸಾಕ್ಷಿ ಜೊತೆ ಸೆಲ್ಫಿ ತೆಗೆಸಿಕೊಳ್ಳಲು ಮುಂದಾಗಿದ್ದರು. ಚೆನ್ನೈ ಸೂಪರ್ ಕಿಂಗ್ಸ್ ಕಟ್ಟಾ ಅಭಿಮಾನಿಯಾಗಿರುವ ಸಾಕ್ಷಿ ಪ್ರತಿ ಪಂದ್ಯದಲ್ಲೂ ಮೈದಾನದಲ್ಲಿ ಉಪಸ್ಥಿತರಿದ್ದು ಪತಿ ತಂಡಕ್ಕೆ ಬೆಂಬಲ ನೀಡ್ತಾ ಬಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...