alex Certify
ಕನ್ನಡ ದುನಿಯಾ       Mobile App
       

Kannada Duniya

ಐಪಿಎಲ್ ನಲ್ಲಿ ಮಿಂಚಿದ ಆಟಗಾರರಿಗೆ ಟೀಂ ಇಂಡಿಯಾದಲ್ಲಿ ಸಿಗಲಿದ್ಯಾ ಸ್ಥಾನ?

ಐಪಿಎಲ್ ಯುವ ಆಟಗಾರರಿಗೆ ಉತ್ತಮ ಪ್ರದರ್ಶನ ತೋರಲು ಒಂದು ಉತ್ತಮ ವೇದಿಕೆ. ಐಪಿಎಲ್ -11 ನೇ ಆವೃತ್ತಿಯಲ್ಲಿ ಅನೇಕ ಯುವ ಆಟಗಾರರು ಹಾಗೂ ಹಳೆ ಆಟಗಾರರು ಮೈದಾನದಲ್ಲಿ ಮಿಂಚಿದ್ದಾರೆ. ಈ ಮೂಲಕ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಹಾದಿಯನ್ನು ಸುಗಮ ಮಾಡಿಕೊಂಡಿದ್ದಾರೆ.

ಮಂಗಳವಾರ ಸಂಜೆ ಐರ್ಲೆಂಡ್ ಹಾಗೂ ಇಂಗ್ಲೆಂಡ್ ಪ್ರವಾಸದ ಟಿ-20 ಮತ್ತು ಏಕದಿನ ಪಂದ್ಯಕ್ಕೆ ಭಾರತ ತಂಡದ ಆಯ್ಕೆ ನಡೆಯಲಿದೆ. ಐಪಿಎಲ್ ಫಾರ್ಮ್ ನೋಡಿ ಕೆಲ ಯುವ ಹಾಗೂ ಕೆಲ ಅನುಭವಿ ಆಟಗಾರರು ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ ಎನ್ನಲಾಗ್ತಿದೆ.

ಕಿಂಗ್ಸ್ ಇಲವೆನ್ ಪಂಜಾಬ್ ತಂಡದಲ್ಲಿ ಅಬ್ಬರಿಸುತ್ತಿರುವ ಕೆ.ಆರ್. ರಾಹುಲ್ ಗೆ ಏಕದಿನ ತಂಡದಲ್ಲಿ ಸ್ಥಾನ ಸಿಗೋದು ಬಹುತೇಕ ಖಚಿತವಾಗಿದೆ. ಟೆಸ್ಟ್ ಹಾಗೂ ಟ್ವೆಂಟಿ-20 ತಂಡದಲ್ಲಿರುವ ರಾಹುಲ್, ಶ್ರೀಲಂಕಾ ಪ್ರವಾಸದಲ್ಲಿ ಕೆಟ್ಟ ಪ್ರದರ್ಶನ ತೋರಿದ್ದರಿಂದ ಏಕದಿನ ತಂಡದಿಂದ ಹೊರಗಿದ್ದರು.

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ವಿಕೆಟ್ ಕಬಳಿಸುತ್ತಿರುವ ಉಮೇಶ್ ಯಾದವ್ ಕೂಡ ತಂಡಕ್ಕೆ ವಾಪಸ್ ಆಗುವುದು ಬಹುತೇಕ ಖಚಿತವಾಗಿದೆ. 2017ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಒಂದೇ ಒಂದು ಏಕದಿನ ಪಂದ್ಯವನ್ನಾಡಿದ್ದ ಉಮೇಶ್ ಯಾದವ್ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ತಂಡದಿಂದ ಹೊರಗಿದ್ದರು.

2016ರ ನಂತ್ರ ಮತ್ತೊಮ್ಮೆ ಅಂಬಟಿ ರಾಯಡು ತಂಡಕ್ಕೆ ವಾಪಸ್ ಆಗುವ ದಾರಿಯನ್ನು ಸುಲಭ ಮಾಡಿಕೊಂಡಿದ್ದಾರೆ.ಇಂಗ್ಲೆಂಡ್ ವಿರುದ್ಧ ನಡೆಯುವ 20-20 ತಂಡದಲ್ಲಿ ರಾಯಡು ಸ್ಥಾನ ಪಡೆಯಲಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಕೌಂಟಿ ಕ್ರಿಕೆಟ್ ನಲ್ಲಿ ಪಾಲ್ಗೊಳ್ಳುತ್ತಿರುವುದ್ರಿಂದ ಅಫ್ಘಾನಿಸ್ತಾನದಲ್ಲಿ ನಡೆಯುವ ಪಂದ್ಯಕ್ಕೆ ಅಜಿಂಕ್ಯ ರಹಾನೆ ನಾಯಕತ್ವ ವಹಿಸಿಕೊಳ್ಳಲಿದ್ದಾರೆ ಎನ್ನಲಾಗ್ತಿದೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...