alex Certify
ಕನ್ನಡ ದುನಿಯಾ       Mobile App
       

Kannada Duniya

ಮ್ಯಾಚ್ ಫಿಕ್ಸಿಂಗ್ ಗೆ 10 ವರ್ಷ ಜೈಲು

Anurag 2

ನವದೆಹಲಿ: ಕ್ರೀಡಾಪಟುಗಳು ಮ್ಯಾಚ್ ಫಿಕ್ಸಿಂಗ್ ನಂತಹ ಕೃತ್ಯದಲ್ಲಿ ಭಾಗಿಯಾದರೆ, 10 ವರ್ಚ ಜೈಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ತರಲು ಚಿಂತನೆ ನಡೆದಿದೆ. ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್, ರಾಷ್ಟ್ರೀಯ ಕ್ರೀಡಾ ನೀತಿ ಆಯೋಗ ವಿಧೇಯಕ ಜಾರಿಗೆ ಮುಂದಾಗಿದ್ದಾರೆ.

2013ರಲ್ಲಿ ನಡೆದ ಮ್ಯಾಚ್ ಫಿಕ್ಸಿಂಗ್ ಪ್ರಕರಣ ಅಲ್ಲೋಲ ಕಲ್ಲೋಲ ಸೃಷ್ಠಿಸಿತ್ತು. ಈ ಹಿನ್ನೆಲೆಯಲ್ಲಿ ಬಿಸಿಸಿಐ ಮಹತ್ವದ ಕ್ರಮ ಕೈಗೊಳ್ಳಲು ಮುಂದಾಗಿದ್ದು, ರಾಷ್ಟ್ರೀಯ ಕ್ರೀಡಾ ನೀತಿ ಆಯೋಗದ ವಿಧೇಯಕ ಜಾರಿಗೆ ನಿರ್ಧರಿಸಿದೆ. ಅದರಂತೆ ಯಾವುದೇ ಕ್ರೀಡಾಪಟು ಮ್ಯಾಚ್ ಫಿಕ್ಸಿಂಗ್ ನಲ್ಲಿ ಭಾಗಿಯಾದರೆ, 10 ವರ್ಷ ಜೈಲು ಶಿಕ್ಷೆ ವಿಧಿಸಬಹುದಾಗಿದೆ. 2013ರಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ 6ನೇ ಆವೃತ್ತಿಯಲ್ಲಿ ಸ್ಪಾಟ್ ಫಿಕ್ಸಿಂಗ್ ಸಂಚಲನ ಸೃಷ್ಠಿಸಿತ್ತು.

ಸ್ಪಾಟ್ ಫಿಕ್ಸಿಂಗ್ ನಡೆಸಿದ ಆರೋಪದ ಮೇಲೆ, ಎಸ್. ಶ್ರೀಶಾಂತ್, ಅಜಿತ್ ಚಾಂಡಿಲಾ, ಅಂಕಿತ್ ಚವ್ಹಾಣ್ ಅವರನ್ನು ಬಂಧಿಸಲಾಗಿತ್ತು. ಕ್ರಿಕೆಟ್ ನಲ್ಲಿ ಇತ್ತೀಚೆಗೆ ಫಿಕ್ಸಿಂಗ್ ಪ್ರಕರಣ ಹೆಚ್ಚಾಗಿ ಕಂಡು ಬಂದ ಕಾರಣ, ವಿಧೇಯಕ ಜಾರಿಗೆ ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...