alex Certify
ಕನ್ನಡ ದುನಿಯಾ       Mobile App
       

Kannada Duniya

ಮುಂದಿನ ವರ್ಷ ಇಂಗ್ಲೆಂಡ್ ನಲ್ಲಿ 5 ಟೆಸ್ಟ್ ಪಂದ್ಯವನ್ನಾಡಲಿದೆ ಭಾರತ

ಮುಂದಿನ ವರ್ಷ ಭಾರತ ಕ್ರಿಕೆಟ್ ಟೀಂ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಐದು ಟೆಸ್ಟ್, ಮೂರು ಏಕದಿನ ಪಂದ್ಯ ಹಾಗೂ ಮೂರು ಟಿ-20 ಪಂದ್ಯಗಳನ್ನು ಆಡಲಿದೆ. ಇಸಿಬಿ ಮಂಗಳವಾರ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದೆ.

ಜುಲೈ 3,2018 ರಂದು ಇಂಗ್ಲೆಂಡ್ ನೆಲದಲ್ಲಿ ಮೊದಲ ಟಿ-20 ಪಂದ್ಯವನ್ನಾಡಲಿದೆ ಭಾರತ. ಟಿ-20 ಸರಣಿ ನಂತ್ರ ಜುಲೈ 12ರಿಂದ ಏಕದಿನ ಪಂದ್ಯ ಶುರುವಾಗಲಿದೆ. ಆಗಸ್ಟ್ ನಲ್ಲಿ ಟೀಂ ಇಂಡಿಯಾ ಟೆಸ್ಟ್ ಪಂದ್ಯವನ್ನಾಡಲಿದೆ.ಈ ಬಗ್ಗೆ ಇಸಿಬಿ ಮುಖ್ಯ ಕಾರ್ಯನಿರ್ವಾಹಕ ಟಾಮ್ ಹ್ಯಾರಿಸನ್ ಮಾಹಿತಿ ನೀಡಿದ್ದಾರೆ. ಮುಂದಿನ ವರ್ಷ ಭಾರತದ ವಿರುದ್ಧದ ಐದು ಟೆಸ್ಟ್ ಪಂದ್ಯಗಳು ಮಹತ್ವದ ಪಂದ್ಯಗಳಾಗಿರಲಿವೆ ಎಂದಿದ್ದಾರೆ.

ಈ ಹೋರಾಟಕ್ಕೆ ಇಡೀ ವಿಶ್ವವೇ ಕಾಯುತ್ತಿದೆ. ಟೆಸ್ಟ್ ಕ್ರಿಕೆಟ್ ನಲ್ಲಿ ಇಂಗ್ಲೆಂಡ್ ಬಲವಾಗಿದ್ದು, ಎರಡು ಬಲಿಷ್ಠ ತಂಡಗಳು ಸೆಣೆಸಾಡಲಿವೆ. 2014ರಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ಪ್ರವಾಸ ಕೈಗೊಂಡಿತ್ತು. 1-3 ರಲ್ಲಿ ಟೀಂ ಇಂಡಿಯಾ ಸೋಲುಂಡಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...