alex Certify
ಕನ್ನಡ ದುನಿಯಾ       Mobile App
       

Kannada Duniya

ವಿರಾಟ್ ಕೊಹ್ಲಿ ಆಯ್ತು, ಈಗ ಗೇಲ್ ಸರದಿ

gale-d-rcb

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ಪ್ರಸಕ್ತ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೀನಾಯ ಪ್ರದರ್ಶನ ನೀಡಿದೆ.

ತಂಡದ ಅಭಿಮಾನಿಗಳಲ್ಲಿ ನಾಯಕ ವಿರಾಟ್ ಕೊಹ್ಲಿ ಈಗಾಗಲೇ ಕ್ಷಮೆಯಾಚಿಸಿದ್ದಾರೆ. ನಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದೇವೆ. ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗದಿದ್ದಕ್ಕೆ ಆರ್.ಸಿ.ಬಿ. ಅಭಿಮಾನಿಗಳಲ್ಲಿ ಕ್ಷಮೆ ಕೋರುತ್ತೇನೆ ಎಂದು ಕೊಹ್ಲಿ ಹೇಳಿದ್ದರು.

ಈಗ ಆರ್.ಸಿ.ಬಿ. ತಂಡದ ಸ್ಪೋಟಕ ಆಟಗಾರ ಕ್ರಿಸ್ ಗೇಲ್, ಸಾರಿ ಕೇಳಿದ್ದಾರೆ. ನಮ್ಮ ತಂಡ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗದ್ದಕ್ಕೆ ಅಭಿಮಾನಿಗಳಲ್ಲಿ ಕ್ಷಮೆ ಕೋರುವೆ. ನನ್ನ ಆಟದ ಬಗ್ಗೆ ನನಗೆ ತೃಪ್ತಿ ಇಲ್ಲ. ಸಾಮರ್ಥ್ಯಕ್ಕೆ ತಕ್ಕಂತೆ ಪ್ರದರ್ಶನ ನೀಡದ ಕಾರಣ ಆಟಗಾರರಿಗೂ ನೋವಾಗಿದೆ ಎಂದು ತಿಳಿಸಿದ್ದಾರೆ.

ಮುಂದಿನ ಆವೃತ್ತಿಯಲ್ಲಿ ಉತ್ತಮ ಪ್ರದರ್ಶನವನ್ನು ನೀಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಆರ್.ಸಿ.ಬಿ. ಆಡಿರುವ 13 ಪಂದ್ಯಗಳಲ್ಲಿ 2 ರಲ್ಲಿ ಮಾತ್ರ ಜಯಗಳಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...