alex Certify
ಕನ್ನಡ ದುನಿಯಾ       Mobile App
       

Kannada Duniya

ಲಂಕಾ ಸರಣಿಗೆ ಟೀಂ ಇಂಡಿಯಾ ರೆಡಿ : ಪಾಂಡ್ಯಗೆ ವಿಶ್ರಾಂತಿ

ನವದೆಹಲಿ: ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು, ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಲಾಗಿದೆ.

ಪಾಂಡ್ಯ ನಿರಂತರ ಸರಣಿಯಿಂದ ಗಾಯಗೊಳ್ಳಬಹುದಾದ ಸಾಧ್ಯತೆ ಕಾರಣ 3 ಟೆಸ್ಟ್ ಪಂದ್ಯಗಳಿಗೆ ಅವರಿಗೆ ವಿಶ್ರಾಂತಿ ನೀಡಲಾಗಿದೆ ಎಂದು ಬಿ.ಸಿ.ಸಿ.ಐ. ಹೇಳಿದೆ. ಲಂಕಾ ಪ್ರವಾಸದಲ್ಲಿ ಯಶಸ್ವಿಯಾಗಿದ್ದ ಟೀಂ ಇಂಡಿಯಾ ಆಟಗಾರರನ್ನು ಬಹುತೇಕ ಆಯ್ಕೆ ಮಾಡಲಾಗಿದೆ.

ಮೊದಲ 2 ಟೆಸ್ಟ್ ಪಂದ್ಯಗಳಿಗೆ ವಿರಾಟ್ ಕೊಹ್ಲಿ(ನಾಯಕ), ಕೆ.ಎಲ್. ರಾಹುಲ್, ಎಂ. ವಿಜಯ್, ಶಿಖರ್ ಧವನ್, ಚೇತೇಶ್ವರ ಪೂಜಾರ, ಅಜಿಂಕ್ಯಾ ರೆಹಾನೆ(ಉಪ ನಾಯಕ), ರೋಹಿತ್ ಶರ್ಮಾ, ವೃದ್ಧಿಮಾನ್ ಸಹ(ವಿಕೆಟ್ ಕೀಪರ್), ಆರ್. ಅಶ್ವಿನ್, ರವೀಂದ್ರ ಜಡೇಜ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಭುವನೇಶ್ವರ್ ಕುಮಾರ್, ಇಶಾಂತ್ ಶರ್ಮಾ ಅವರನ್ನು ಆಯ್ಕೆ ಮಾಡಲಾಗಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...