alex Certify
ಕನ್ನಡ ದುನಿಯಾ       Mobile App
       

Kannada Duniya

ಆಟಗಾರ್ತಿಯ ಮೇಲೆ ಕೋಚ್ ನಿಂದ ಅತ್ಯಾಚಾರ

ಹರಿಯಾಣದ ಅಪ್ರಾಪ್ತ ವಾಲಿಬಾಲ್ ಆಟಗಾರ್ತಿ, ಕೋಚ್ ವಿರುದ್ಧ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ. ಸತತ ಎರಡೂವರೆ ವರ್ಷಗಳ ಕಾಲ ಕೋಚ್ ಅತ್ಯಾಚಾರ ಮಾಡಿದ್ದಾನೆ. ಅಷ್ಟೇ ಅಲ್ಲ ಈ ವಿಚಾರವನ್ನು ಬಹಿರಂಗಪಡಿಸಿದ್ರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಅಂತ ತರಬೇತುದಾರನ ವಿರುದ್ಧ ದೂರು ದಾಖಲಿಸಿದ್ದಾಳೆ.

ಹರಿಯಾಣದ ರೇವಾರಿಯಲ್ಲಿ ಈ ಘಟನೆ ನಡೆದಿದ್ದು, ಗುರುಗಾಂವ್, ರೋಹ್ಟಕ್ ಹಾಗೂ ಮತ್ತೊಂದು ಕಡೆಯಲ್ಲಿ ಕೋಚ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಅಂತ ಯುವತಿ ಆರೋಪಿಸಿದ್ದಾಳೆ. ಪೋಸ್ಕೋ ಕಾಯ್ದೆಯ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ವಿಚಾರಣೆಯನ್ನ ಮುಂದುವರೆಸಿದ್ದಾರೆ.

ಯುವತಿ ದೂರು ನೀಡಿದ್ದರಿಂದ ಕೋಚ್ ತಲೆಮರೆಸಿಕೊಂಡಿದ್ದು, ಪೊಲೀಸರು ಆತನ ಬಂಧನಕ್ಕೆ ಬಲೆ ಬೀಸಿದ್ದಾರೆ. ಕಳೆದ ವರ್ಷ ಕೂಡ ಇಂತದ್ದೇ ಘಟನೆ ನಡೆದಿತ್ತು. ರಾಷ್ಟ್ರೀಯ ಕಬ್ಬಡಿ ಆಟಗಾರ್ತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಕಾರಣಕ್ಕೆ ನರೇಶ್ ದಹಿಯಾ ಎಂಬ ಕುಸ್ತಿ ಪಟುವನ್ನು ಪೊಲೀಸರು ಬಂಧಿಸಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...