alex Certify
ಕನ್ನಡ ದುನಿಯಾ       Mobile App
       

Kannada Duniya

ಪತ್ರಿಕಾಗೋಷ್ಠಿಯಲ್ಲಿ ಶಮಿ ಬಗ್ಗೆ ಹಸೀನ್ ಹೇಳಿದ್ದೇನು?

ಟೀಂ ಇಂಡಿಯಾ ಆಟಗಾರ ಮೊಹಮ್ಮದ್ ಶಮಿ ಜೊತೆ ಹೊಂದಾಣಿಕೆ ಸಾಧ್ಯವಿಲ್ಲವೆಂದು ಪತ್ನಿ ಹಸೀನ್ ಸ್ಪಷ್ಟಪಡಿಸಿದ್ದಾರೆ. ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹಸೀನ್, ಶಮಿ ಜೊತೆ ಸಾಮರಸ್ಯ ಸಾಧ್ಯವಿಲ್ಲ. ಶಮಿ ಜೊತೆ ಹೊಂದಾಣಿಕೆ ಮಾಡಿಕೊಂಡ್ರೆ ಜನರು ನನ್ನನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತಾರೆ ಎಂದಿದ್ದಾರೆ.

ಸಂಬಂಧ ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡಿದ್ದೇನೆ. ಶಮಿ ನನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ. ಈಗ ಹೊಂದಾಣಿಕೆ ಮಾತನಾಡುತ್ತಿದ್ದಾರೆ. ನಮ್ಮಿಬ್ಬರ ಮಧ್ಯೆ ದೊಡ್ಡ ಬಿರುಕು ಮೂಡಿದ್ದು ಹೊಂದಾಣಿಕೆ ಅಸಾಧ್ಯವೆಂದು ಹಸೀನ್ ಹೇಳಿದ್ದಾರೆ. ನಾಲ್ಕು ದಿನಗಳ ಕಾಲ ಶಮಿ ಜೊತೆ ಮಾತನಾಡಿದ್ದೇನೆ. ಪ್ರತಿ ಬಾರಿಯೂ ನಾನು ತಪ್ಪು ಮಾಡಿಲ್ಲ ಎಂದಿದ್ದಾರೆ ಶಮಿ. ನಂತ್ರ ನನ್ನನ್ನು ನಿರ್ಲಕ್ಷಿಸಲು ಶುರು ಮಾಡಿದ್ದರು ಎಂದು ಹಸೀನ್ ದೂರಿದ್ದಾರೆ.

ಫೋನ್ ಕಳೆಯುತ್ತಿದ್ದಂತೆ ಶಮಿ ವರ್ತನೆ ಸಂಪೂರ್ಣ ಬದಲಾಗಿತ್ತು. ಮೊಬೈಲ್ ನನ್ನ ಕೈಗೆ ಸಿಗದಿದ್ದರೆ ಶಮಿ ಈಗಾಗ್ಲೇ ನನಗೆ ವಿಚ್ಛೇದನದ ಅರ್ಜಿ ಕಳುಹಿಸುತ್ತಿದ್ದರು ಎಂದು ಹಸೀನ್ ಹೇಳಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...