alex Certify
ಕನ್ನಡ ದುನಿಯಾ       Mobile App
       

Kannada Duniya

ತೊಡೆ ತಟ್ಟಿ ಸಂಭ್ರಮಿಸಿದ ಕೊಹ್ಲಿ ಬಾಯ್ಸ್

ಕಾನ್ಪುರದಲ್ಲಿ ನಡೆದ 3 ನೇ ಪಂದ್ಯವನ್ನು ಜಯಿಸುವ ಮೂಲಕ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ, ಏಕದಿನ ಸರಣಿಯನ್ನು ವಶಕ್ಕೆ ಪಡೆದಿದೆ.

ಏಕದಿನ ಪಂದ್ಯಗಳಲ್ಲಿ ತಮ್ಮ 32 ನೇ ಶತಕವನ್ನು ಗಳಿಸಿದ ವಿರಾಟ್ ಕೊಹ್ಲಿ 9000 ರನ್ ಗಳಿಸಿದವರ ಸಾಲಿಗೆ ಸೇರಿದ್ದಾರೆ. ಮೈದಾನದಲ್ಲಿ ಸರಣಿಯನ್ನು ಜಯಿಸಿದ ಟೀಂ ಇಂಡಿಯಾ ಆಟಗಾರರ ಸಂಭ್ರಮ ಮುಗಿಲು ಮುಟ್ಟಿದ್ದು, ಅದು ಡ್ರೆಸ್ಸಿಂಗ್ ರೂಂ ನಲ್ಲೂ ಮುಂದುವರೆದಿದೆ.

ಡ್ರೆಸ್ಸಿಂಗ್ ರೂಂನಲ್ಲಿ ಕೊಹ್ಲಿ ಟೀಂ ತೊಡೆ ತಟ್ಟಿ ನಮಗ್ಯಾರೂ ಸಾಟಿ ಇಲ್ಲ ಎನ್ನುವಂತೆ ಪೋಸ್ ಕೊಟ್ಟಿದ್ದು, ವಿರಾಟ್ ಕೊಹ್ಲಿ ಈ ಸಂಭ್ರಮದ ಕ್ಷಣದ ಫೋಟೋವನ್ನು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದು, ವೈರಲ್ ಆಗಿದೆ.

ಕೊಹ್ಲಿ ನೇತೃತ್ವದಲ್ಲಿ ಯಶಸ್ವಿಯಾಗಿ ಮುನ್ನಡೆದಿರುವ ಟೀಂ ಇಂಡಿಯಾ ಟೆಸ್ಟ್ ಹಾಗೂ ಏಕದಿನ ಪಂದ್ಯಗಳಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...