alex Certify
ಕನ್ನಡ ದುನಿಯಾ       Mobile App
       

Kannada Duniya

ಟಿ -20 ಸರಣಿ ಗೆಲುವಿಗೆ ಭಾರತ – ಆಸೀಸ್ ಫೈಟ್

ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಟಿ -20 ಸರಣಿಯ 3 ನೇ ಪಂದ್ಯ ನಡೆಯಲಿದೆ. ತಲಾ 1 ಪಂದ್ಯಗಳನ್ನು ಜಯಿಸಿರುವ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಇಂದಿನ ಪಂದ್ಯವನ್ನು ಜಯಿಸಿ ಸರಣಿಯನ್ನು ವಶಕ್ಕೆ ಪಡೆಯಲು ಕಾರ್ಯತಂತ್ರ ರೂಪಿಸಿವೆ.

ರಾಂಚಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭರ್ಜರಿ ಜಯ ಗಳಿಸಿದ್ದ ಕೊಹ್ಲಿ ಬಳಗ, ಗುವಾಹಟಿಯಲ್ಲಿ ನಡೆದ ಪಂದ್ಯವನ್ನು ಸೋತಿತ್ತು. ಟೆಸ್ಟ್ ಹಾಗೂ ಏಕದಿನ ಸರಣಿಯನ್ನು ಕಳೆದುಕೊಂಡಿರುವ ಆಸ್ಟ್ರೇಲಿಯಾ ಟಿ -20 ಸರಣಿಯನ್ನು ಜಯಿಸುವ ವಿಶ್ವಾಸದಲ್ಲಿದೆ.

ಉಭಯ ತಂಡಗಳು 3 ನೇ ಪಂದ್ಯವನ್ನು ಜಯಿಸಲು ಕಾರ್ಯತಂತ್ರ ರೂಪಿಸಿವೆ. ಹೈದರಾಬಾದ್ ನಲ್ಲಿ ಕೆಲ ದಿನಗಳಿಂದ ಮಳೆಯಾಗುತ್ತಿದ್ದು, ಪಂದ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮಳೆಯಾಗದಿದ್ದರೆ, ರನ್ ಮಳೆಯಂತೂ ಗ್ಯಾರಂಟಿ.

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶಿಖರ್ ಧವನ್ ಬ್ಯಾಟಿಂಗ್ ನಲ್ಲಿ ಮಿಂಚುವ ಸಾಧ್ಯತೆ ಇದೆ. ಆಸೀಸ್ ಗೆ ಡೇವಿಡ್ ವಾರ್ನರ್, ಆರನ್ ಫಿಂಚ್, ಟ್ರಾವಿಸ್ ಹೆಡ್ ಬ್ಯಾಟಿಂಗ್ ಬಲ ತುಂಬಲಿದ್ದಾರೆ. ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...