alex Certify
ಕನ್ನಡ ದುನಿಯಾ       Mobile App
       

Kannada Duniya

ಕ್ರಿಕೆಟಿಗನ ಖಾಸಗಿ ವಿಡಿಯೋ ಬಹಿರಂಗಗೊಳಿಸುವುದಾಗಿ ಬ್ಲಾಕ್ ಮೇಲ್

sharjeel khanಖ್ಯಾತ ಕ್ರಿಕೆಟಿಗನೊಬ್ಬನಿಗೆ ಆತನ ಖಾಸಗಿ ವಿಡಿಯೋ ಬಹಿರಂಗಗೊಳಿಸುವುದಾಗಿ ಬೆದರಿಸಿ ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಸ್ವತಃ ಕ್ರಿಕೆಟಿಗ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಹೇಳಿಕೊಂಡಿದ್ದು, ನಕಲಿ ವಿಡಿಯೋ ಹೆಸರಿನಲ್ಲಿ ಬೆದರಿಕೆ ಹಾಕಲಾಗಿದೆ ಎಂದಿದ್ದಾರೆ.

ಪಾಕಿಸ್ತಾನದ ಓಪನರ್ 26 ವರ್ಷದ ಶಾರ್ಜಿಲ್ ಖಾನ್ ಅವರಿಗೆ ಅಪರಿಚಿತ ವ್ಯಕ್ತಿಗಳು ಫೋನ್ ಮೂಲಕ ಈ ಬೆದರಿಕೆ ಹಾಕಿದ್ದಾರೆಂದು ಹೇಳಲಾಗಿದ್ದು, 2 ಲಕ್ಷ ರೂ. ಹಣ ನೀಡದಿದ್ದರೆ ಈ ವಿಡಿಯೋವನ್ನು ಮಾಧ್ಯಮಗಳ ಮುಂದೆ ಬಹಿರಂಗಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆಂದು ಹೇಳಲಾಗಿದೆ.

ಶಾರ್ಜಿಲ್ ಖಾನ್ ಅಥವಾ ಅವರ ಕುಟುಂಬಸ್ಥರು ಪೊಲೀಸರಿಗೆ ಈ ಕುರಿತು ಅಧಿಕೃತ ದೂರು ದಾಖಲಿಸಿಲ್ಲ. ಅವರು ದೂರು ದಾಖಲಿಸಿದರೆ ಬ್ಲಾಕ್ ಮೇಲ್ ಮಾಡುತ್ತಿರುವರ ಮೇಲೆ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಮಧ್ಯೆ ಶಾರ್ಜಿಲ್ ಖಾನ್, ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ವಿಡಿಯೋ ಒಂದನ್ನು ಹಾಕಿ ತಮಗೆ ಬ್ಲಾಕ್ ಮೇಲ್ ಮಾಡುತ್ತಿರುವ ಕುರಿತು ಹೇಳಿಕೊಂಡಿದ್ದಾರೆ. ತಮ್ಮ ಅಭಿಮಾನಿಗಳು ಇಂತಹ ನಕಲಿ ವಿಡಿಯೋವನ್ನು ನಂಬಬಾರದು ಎಂದಿರುವ ಶಾರ್ಜಿಲ್, ತಾವು ಯಾವುದೇ ತಪ್ಪು ಮಾಡಿಲ್ಲವೆಂದಿದ್ದಾರೆ. ಶಾರ್ಜಿಲ್ ಇತ್ತೀಚೆಗೆ ನಡೆದಿದ್ದ ಏಷ್ಯಾ ಕಪ್ ಹಾಗೂ ವಿಶ್ವಟಿ20 ಪಂದ್ಯದಲ್ಲಿ ಪಾಕ್ ಪರ ಆಟವಾಡಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...