alex Certify
ಕನ್ನಡ ದುನಿಯಾ       Mobile App
       

Kannada Duniya

ಸೆಮಿಫೈನಲ್ ಎಂಟ್ರಿಗೆ ಪಾಕ್ –ಲಂಕಾ ಫೈಟ್

Britain Cricket - Pakistan v South Africa - 2017 ICC Champions Trophy Group B - Edgbaston - June 7, 2017 Pakistan’s Junaid Khan celebrates taking the wicket of South Africa’s Chris Morris with teammates Action Images via Reuters / Andrew Boyers Livepic EDITORIAL USE ONLY.

ಕಾರ್ಡಿಫ್: ಇಲ್ಲಿನ ಸೋಫಿಯಾ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಐ.ಸಿ.ಸಿ. ಚಾಂಪಿಯನ್ಸ್ ಟ್ರೋಫಿಯ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಲಿವೆ.

ಮೊದಲ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಸೋತಿದ್ದ ಲಂಕಾ 2 ನೇ ಪಂದ್ಯದಲ್ಲಿ ಭಾರತ ತಂಡದ ವಿರುದ್ಧ ಜಯಗಳಿಸಿತ್ತು. ಮೊದಲ ಪಂದ್ಯದಲ್ಲಿ ಭಾರತದ ವಿರುದ್ಧ ಸೋಲು ಕಂಡಿದ್ದ ಪಾಕಿಸ್ತಾನ, ದಕ್ಷಿಣ ಆಫ್ರಿಕಾ ವಿರುದ್ಧ ಜಯಗಳಿಸಿತ್ತು.

ಇಂದು ನಡೆಯಲಿರುವ ಪಂದ್ಯದಲ್ಲಿ ಗೆದ್ದವರಿಗೆ ಸೆಮಿಫೈನಲ್ ಗೆ ಪ್ರವೇಶ ಸಿಗಲಿದ್ದು, ಮಾಡು ಇಲ್ಲವೇ ಮಡಿ ಪಂದ್ಯವಾಗಿರುವುದರಿಂದ ಇಂದಿನ ಪಂದ್ಯವನ್ನು ಗೆಲ್ಲಲು ಉಭಯ ತಂಡಗಳು ಕಾರ್ಯತಂತ್ರ ರೂಪಿಸಿವೆ.

ಶ್ರೀಲಂಕಾ ತಂಡದಲ್ಲಿ ಮ್ಯಾಥ್ಯೂಸ್, ಕುಸಾಲ್ ಮೆಂಡಿಸ್, ಧನುಷ್ಕ ಗುಣತಿಲಕ ಮಿಂಚುವ ನಿರೀಕ್ಷೆ ಇದೆ. ಮಧ್ಯಾಹ್ನ 3 ಗಂಟೆಗೆ ಪಂದ್ಯ ಆರಂಭವಾಗಲಿದ್ದು, ಯಾರು ಸೆಮಿಫೈನಲ್ ಗೆ ಎಂಟ್ರಿ ಕೊಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...