alex Certify
ಕನ್ನಡ ದುನಿಯಾ       Mobile App
       

Kannada Duniya

ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ

tosss-d

ಲಂಡನ್: ಐ.ಸಿ.ಸಿ. ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿವೆ.

ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ. ಕ್ರಿಕೆಟ್ ಲೋಕದ ಅತಿ ದೊಡ್ಡ ಕಾದಾಟವೆಂದೇ ಹೇಳಲಾಗುತ್ತಿರುವ ಪಂದ್ಯವನ್ನು ಗೆಲ್ಲಲು ಉಭಯ ತಂಡಗಳು ಕಾರ್ಯ ತಂತ್ರ ರೂಪಿಸಿವೆ.

ಕೆನಿಂಗ್ಟನ್ ಓವಲ್ ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದು, ಇಡೀ ವಿಶ್ವದ ಗಮನ ಸೆಳೆದಿದೆ. ಪಾಕ್ ತಂಡದಲ್ಲಿ ಬಾಬರ್ ಅಜಮ್, ಮೊಹಮ್ಮದ್ ಅಮಿರ್, ಹಸನ್ ಅಲಿ ಸ್ಟಾರ್ ಆಟಗಾರರಾಗಿದ್ದಾರೆ. ಟೀಂ ಇಂಡಿಯಾ ಪರವಾಗಿ ರೋಹಿತ್ ಶರ್ಮ, ಶಿಖರ್ ಧವನ್ ಟೂರ್ನಿಯಲ್ಲಿ ಮಿಂಚಿದ್ದು, ಇಂದಿನ ಪಂದ್ಯದಲ್ಲಿಯೂ ಕಮಾಲ್ ಮಾಡುವ ಸಾಧ್ಯತೆ ಇದೆ.

ಐ.ಸಿ.ಸಿ. ಟೂರ್ನಿಯಲ್ಲಿ ಭಾರತದ ವಿರುದ್ಧ ಎಂದೂ ಗೆಲ್ಲದ ಪಾಕ್ ಇಂದಿನ ಪಂದ್ಯವನ್ನು ಗೆಲ್ಲುವ ಮೂಲಕ ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳಲು ಪ್ರಯತ್ನ ನಡೆಸಿದೆ. ಹಾಲಿ ಚಾಂಪಿಯನ್ ಭಾರತ ತನ್ನಲ್ಲಿಯೇ ಪ್ರಶಸ್ತಿ ಉಳಿಸಿಕೊಳ್ಳುವ ಉತ್ಸಾಹದಲ್ಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...