alex Certify
ಕನ್ನಡ ದುನಿಯಾ       Mobile App
       

Kannada Duniya

ಕುತೂಹಲ ಮೂಡಿಸಿದ ಫೈನಲ್ ಫೈಟ್

pak-sun

ಲಂಡನ್: ಐ.ಸಿ.ಸಿ. ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯ ಇಂದು ಮಧ್ಯಾಹ್ನ ನಡೆಯಲಿದ್ದು, ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ.

ಕ್ರಿಕೆಟ್ ಲೋಕದ ಅತಿ ದೊಡ್ಡ ಕಾದಾಟವೆಂದೇ ಹೇಳಲಾಗುತ್ತಿರುವ ಪಂದ್ಯವನ್ನು ಗೆಲ್ಲಲು ಉಭಯ ತಂಡಗಳು ಕಾರ್ಯ ತಂತ್ರ ರೂಪಿಸಿವೆ.

ಕೆನಿಂಗ್ಟನ್ ಓವಲ್ ಮೈದಾನದಲ್ಲಿ ಮಧ್ಯಾಹ್ನ 3 ಗಂಟೆಗೆ ಪಂದ್ಯ ಆರಂಭವಾಗಲಿದೆ. ಐ.ಸಿ.ಸಿ. ಟೂರ್ನಿಯಲ್ಲಿ ಭಾರತದ ವಿರುದ್ಧ ಎಂದೂ ಗೆಲ್ಲದ ಪಾಕ್ ಇಂದಿನ ಪಂದ್ಯವನ್ನು ಗೆಲ್ಲುವ ಮೂಲಕ ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳಲು ಪ್ರಯತ್ನ ನಡೆಸಿದೆ.

ಹಾಲಿ ಚಾಂಪಿಯನ್ ಭಾರತ ತನ್ನಲ್ಲಿಯೇ ಪ್ರಶಸ್ತಿ ಉಳಿಸಿಕೊಳ್ಳುವ ಉತ್ಸಾಹದಲ್ಲಿದೆ. ಈ ಟೂರ್ನಿಯಲ್ಲಿ ಉಭಯ ತಂಡಗಳು ಆಡಿರುವ 4 ಪಂದ್ಯಗಳಲ್ಲಿ 3 ಪಂದ್ಯ ಗೆದ್ದು ಫೈನಲ್ ಪ್ರವೇಶಿಸಿವೆ. ಮೊದಲ ಪಂದ್ಯದಲ್ಲಿ ಭಾರತ ಪಾಕಿಸ್ತಾನ ತಂಡವನ್ನು ಸೋಲಿಸಿತ್ತು.

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಪಾಕ್ ನಾಯಕ ಸರ್ಫರಾಜ್ ಅಹಮ್ಮದ್ ಗೆಲುವಿನ ವಿಶ್ವಾಸದಲ್ಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...