alex Certify
ಕನ್ನಡ ದುನಿಯಾ       Mobile App
       

Kannada Duniya

ICC Ranking: 5 ನೇ ಸ್ಥಾನಕ್ಕೇರಿದ ವಿರಾಟ್ ಕೊಹ್ಲಿ

ನವದೆಹಲಿ: ಕೋಲ್ಕೊತ್ತದ ಈಡನ್ ಗಾರ್ಡನ್ ಮೈದಾನದಲ್ಲಿ ಪ್ರವಾಸಿ ಶ್ರೀಲಂಕಾ ವಿರುದ್ಧ ನಡೆದ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಶತಕ ಗಳಿಸಿದ್ದಾರೆ. ಈ ಮೂಲಕ ಅವರು ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ 50 ಶತಕಗಳನ್ನು ಗಳಿಸಿದಂತಾಗಿದೆ.

ಇದೇ ವೇಳೆ ಐ.ಸಿ.ಸಿ. ಟೆಸ್ಟ್ ಬ್ಯಾಟ್ಸ್ ಮನ್ ಗಳ ರ್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ವಿರಾಟ್ ಕೊಹ್ಲಿ 5 ನೇ ಸ್ಥಾನಕ್ಕೇರಿದ್ದಾರೆ.

ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ ಮೊದಲ ಸ್ಥಾನದಲ್ಲಿದ್ದು, ನಂತರದಲ್ಲಿ ಇಂಗ್ಲೆಂಡ್ ನ ಜೋ ರೂಟ್, ನ್ಯೂಜಿಲೆಂಡ್ ನ ಕೇನ್ ವಿಲಿಯಮ್ಸನ್ ಇದ್ದಾರೆ. ಚೇತೇಶ್ವರ ಪೂಜಾರ 4ನೇ ಹಾಗೂ ವಿರಾಟ್ ಕೊಹ್ಲಿ 5 ನೇ ಸ್ಥಾನದಲ್ಲಿದ್ದಾರೆ. ಕೆ.ಎಲ್. ರಾಹುಲ್ 8 ನೇ ಸ್ಥಾನದಲ್ಲಿದ್ದಾರೆ.

ಬೌಲರ್ ಗಳ ಪಟ್ಟಿಯಲ್ಲಿ ರವೀಂದ್ರ ಜಡೇಜಾ ಕುಸಿತ ಕಂಡಿದ್ದಾರೆ. ಇಂಗ್ಲೆಂಡ್ ನ ಜೇಮ್ಸ್ ಆಂಡರ್ಸನ್ 1 ನೇ, ದಕ್ಷಿಣ ಆಫ್ರಿಕಾದ ಕಗಿಸೊ ರಬಾಡ 2 ನೇ, ರವೀಂದ್ರ ಜಡೇಜಾ 3 ನೇ ಹಾಗೂ ರವಿಚಂದ್ರನ್ ಅಶ್ವಿನ್ 4 ನೇ ಸ್ಥಾನದಲ್ಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...