alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಗ್ ಬ್ರೇಕಿಂಗ್: ಐಸಿಸಿ ಅಂಡರ್ 19 ವಿಶ್ವಕಪ್ ಎತ್ತಿ ಹಿಡಿದ ಭಾರತ

ಐಸಿಸಿ ಅಂಡರ್ 19 ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ದಾಖಲೆ ಬರೆದಿದೆ. ನಾಲ್ಕನೇ ಬಾರಿ ವಿಶ್ವಕಪ್ ಎತ್ತಿ ಹಿಡಿಯುವ ಮೂಲಕ ಅಂಡರ್ 19 ವಿಶ್ವಕಪ್ ನಲ್ಲಿ ಅತಿ ಹೆಚ್ಚು ಬಾರಿ ಚಾಂಪಿಯನ್ ಆದ ತಂಡವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಆಸ್ಟ್ರೇಲಿಯಾ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಭಾರತ 8 ವಿಕೆಟ್ ಗಳ ಜಯ ಸಾಧಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಆಸ್ಟ್ರೇಲಿಯಾ ತನ್ನೆಲ್ಲ ವಿಕೆಟ್ ಕಳೆದುಕೊಂಡು 216 ರನ್ ಗಳಿಸಿತ್ತು. ಗುರಿ ಬೆನ್ನು ಹತ್ತಿದ ಟೀಂ ಇಂಡಿಯಾ 8 ವಿಕೆಟ್ ಗೆ 220 ರನ್ ಗಳಿಸಿ ವಿಶ್ವಕಪ್ ತನ್ನ ಕೈವಶ ಮಾಡಿಕೊಂಡಿದೆ. ಮನ್ಜೋತ್ 102 ಬಾಲಿಗೆ 101 ರನ್ ಗಳಿಸಿ ತಂಡಕ್ಕೆ ಆಸರೆಯಾದ್ರು. ಹಾರ್ವಿಕ್ 47 ರನ್ ಗಳಿಸಿದ್ರೆ, ಪ್ರಥ್ವಿ ಶಾ 29 ರನ್ ಕಲೆ ಹಾಕಿದ್ರೆ, ಶುಬ್ಮಾನ್ ಗಿಲ್ 31 ರನ್ ಗಳಿಸಿದ್ರು.

2000 ರಲ್ಲಿ ಭಾರತ ಮೊದಲ ಬಾರಿ ವಿಶ್ವಕಪ್ ಗೆದ್ದಿತ್ತು. ನಂತ್ರ 2008, 2012 ರಲ್ಲಿ ಅಂಡರ್ 19 ವಿಶ್ವಕಪ್ ನಲ್ಲಿ ಚಾಂಪಿಯನ್ ಪಟ್ಟಕ್ಕೇರಿತ್ತು.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...