alex Certify
ಕನ್ನಡ ದುನಿಯಾ       Mobile App
       

Kannada Duniya

‘ಬರ ಸಮಸ್ಯೆ ಬಗೆಹರಿಯುವುದಾದರೆ ಐಪಿಎಲ್ ಕ್ರಿಕೆಟ್ ಸ್ಥಗಿತ’

rahul a15 dr

ಮುಂಬೈ: ಮಹಾರಾಷ್ಟ್ರದಲ್ಲಿ ಭೀಕರ ಬರಗಾಲ ಆವರಿಸಿದ್ದು, ಜನ, ಜಾನುವಾರುಗಳಿಗೆ ಕುಡಿಯಲು ನೀರು ಸಿಗುತ್ತಿಲ್ಲ. ಪರಿಸ್ಥಿತಿ ತೀರಾ ಹದಗೆಟ್ಟಿದ್ದು, ಜನರಿಗೆ ನೀರು ಮಾರೈಕೆ ಮಾಡುವುದೇ ಸವಾಲಿನ ಕೆಲಸವಾಗಿದೆ. ಈ ನಡುವೆ ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ಕೂಡ ನಡೆಯುತ್ತಿದೆ.

ರಾಜ್ಯದಲ್ಲಿ ಬರಗಾಲ ಇರುವುದರಿಂದ ಐಪಿಎಲ್ ಪಂದ್ಯಗಳನ್ನು ಸ್ಥಳಾಂತರಿಸುವಂತೆ ಮುಂಬೈ ಹೈಕೋರ್ಟ್ ಆದೇಶ ನೀಡಿದೆ. ಇದರಿಂದಾಗಿ ಮಹಾರಾಷ್ಟ್ರದಲ್ಲಿ ನಡೆಯಬೇಕಿದ್ದ, 13 ಪಂದ್ಯಗಳನ್ನು ಸ್ಥಳಾಂತರ ಮಾಡಲಾಗಿದೆ. ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಟೀಂ ಇಂಡಿಯಾ ಮಾಜಿ ನಾಯಕ ಸುನಿಲ್ ಗವಾಸ್ಕರ್, ಐಪಿಎಲ್ ಪಂದ್ಯಾವಳಿ ಈಗಾಗಲೇ ಫಿಕ್ಸ್ ಆಗಿದೆ. ನಿಗದಿಯಾಗಿದ್ದ 13 ಪಂದ್ಯಗಳನ್ನು ಸ್ಥಳಾಂತರ ಮಾಡುವುದು ಕಷ್ಟಸಾಧ್ಯ ಎಂದು ಹೇಳಿದ್ದಾರೆ.

ಮತ್ತೊಬ್ಬ ಮಾಜಿ ನಾಯಕ ರಾಹುಲ್ ದ್ರಾವಿಡ್, ಮಹಾರಾಷ್ಟ್ರದಲ್ಲಿ ಬರಗಾಲ ಇದೆ. ಐಪಿಎಲ್ ಪಂದ್ಯಗಳನ್ನು ಸ್ಥಳಾಂತರ ಮಾಡಿದರೆ, ಬರಗಾಲ ಬಗೆಹರಿಯುತ್ತದೆಯೆ? ಎಂದು ಹೇಳಿದ್ದಾರೆ. ಒಂದು ವೇಳೆ ಬರಗಾಲ ಸಮಸ್ಯೆ ಬಗೆಹರಿಯುವುದಾದರೆ, ಐಪಿಎಲ್ ಮ್ಯಾಚ್ ಅನ್ನೇ ನಿಲ್ಲಿಸಬಹುದು ಎಂದು ಹೇಳಿದ್ದಾರೆ. ಸಂಬಂಧವಿಲ್ಲದಿದ್ದರೂ, ಸುಮ್ಮನೆ ಐಪಿಎಲ್ ವಿಚಾರ ತರಲಾಗಿದೆ ಎಂದು ತಣ್ಣನೆಯ ಪ್ರತಿಕ್ರಿಯೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...