alex Certify
ಕನ್ನಡ ದುನಿಯಾ       Mobile App
       

Kannada Duniya

ಆಘಾತಕಾರಿ ಮಾಹಿತಿ ಬಿಚ್ಚಿಟ್ಟ ಕುಲದೀಪ್ ಯಾದವ್

ನವದೆಹಲಿ: ಭಾರತ ಕ್ರಿಕೆಟ್ ತಂಡದ ಆಟಗಾರ ಕುಲದೀಪ್ ಯಾದವ್ ತಮ್ಮ ಜೀವನದಲ್ಲಿ ನಡೆದ ಆಘಾತಕಾರಿ ಘಟನೆಯೊಂದರ ಮಾಹಿತಿಯನ್ನು ಹೇಳಿಕೊಂಡಿದ್ದಾರೆ.

ಕಾನ್ಪುರದ ಚೈನಾ ಮ್ಯಾನ್ ಖ್ಯಾತಿಯ ಕುಲದೀಪ್ ಯಾದವ್(22) ಸದ್ಯ ಭಾರತ ಕ್ರಿಕೆಟ್ ತಂಡದಲ್ಲಿ ಮಿಂಚುತ್ತಿದ್ದಾರೆ. ಅವರು 13 ವರ್ಷದವರಾಗಿದ್ದ ಸಂದರ್ಭದಲ್ಲಿ ಉತ್ತರ ಪ್ರದೇಶದ 15 ವರ್ಷದೊಳಗಿನವರ ತಂಡಕ್ಕೆ ಆಯ್ಕೆಯಾಗದ ಕಾರಣ, ನಿರಾಸೆಯಿಂದ ಆತ್ಮಹತ್ಯೆಗೆ ಯತ್ನಿಸಿದ್ದರಂತೆ.

ಶಾಲೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ನಾನು ವಿನೋದಕ್ಕಾಗಿ ಕ್ರಿಕೆಟ್ ಆಡುತ್ತಿದ್ದೆ. ನಂತರ ಕಠಿಣ ಪರಿಶ್ರಮದಿಂದ ಕ್ರಿಕೆಟ್ ಅಭ್ಯಾಸ ಮಾಡಿದ್ದೆ. ಹೀಗಿದ್ದರೂ ತಂಡಕ್ಕೆ ಆಯ್ಕೆಯಾಗದ ಕಾರಣ ಬೇಸರವಾಗಿ ಆತ್ಮಹತ್ಯೆ ನಿರ್ಧಾರ ಕೈಗೊಂಡಿದ್ದೆ ಎಂದು ಹೇಳಿದ್ದಾರೆ.

ಆಸ್ಟ್ರೇಲಿಯಾದ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್ ಅವರ ಬೌಲಿಗ್ ವಿಡಿಯೊಗಳನ್ನು ನೋಡಿ ಬೌಲಿಂಗ್ ಕಲಿತಿದ್ದೇನೆ. ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ಮಾಜಿ ನಾಯಕ ಎಂ.ಎಸ್. ಧೋನಿ ಅವರ ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...