alex Certify
ಕನ್ನಡ ದುನಿಯಾ       Mobile App
       

Kannada Duniya

ದಾದಾ ದಾಖಲೆ ಅಳಿಸುತ್ತಾರಾ ವಿರಾಟ್…?

ನಾಳೆಯಿಂದ ಬರ್ಮಿಂಗ್ಹ್ಯಾಮ್ ನಲ್ಲಿ ನಡೆಯುವ ಇಂಗ್ಲೆಂಡ್-ಭಾರತದ ನಡುವಣ ಕಾದಾಟ ಎಲ್ಲರ ಗಮನ ಸೆಳೆದಿದೆ. ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿ, ಕೊಹ್ಲಿ ದಾಖಲೆ ನಿರ್ಮಿಸುವ ಹೊಸ್ತಿಲಲ್ಲಿದ್ದಾರೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದ್ರೆ ಕೊಹ್ಲಿ, ಸೌರವ್ ಗಂಗೂಲಿ ದಾಖಲೆಯನ್ನು ಅಳಿಸಿ ಹಾಕಲಿದ್ದಾರೆ.

ಮೊದಲ ಟೆಸ್ಟ್ ನಲ್ಲಿ ವಿರಾಟ್ ಕೊಹ್ಲಿ ಜಯದ ನಗೆ ಬೀರಿದ್ದೇ ಆದಲ್ಲಿ, ಟೆಸ್ಟ್ ನಲ್ಲಿ ಅತಿ ಹೆಚ್ಚು ಪಂದ್ಯ ಗೆದ್ದ ಭಾರತದ ಎರಡನೇ ನಾಯಕ ಎಂಬ ಹಿರಿಮೆ ತಮ್ಮದಾಗಿಸಿಕೊಳ್ಳಲಿದ್ದಾರೆ. ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ 21 ಪಂದ್ಯಗಳನ್ನು ಗೆದ್ದು ಬೀಗಿದೆ.

ಸೌರವ್ ಗಂಗೂಲಿ ಮುಂದಾಳತ್ವದಲ್ಲಿ ಭಾರತ ತಂಡ ಇಷ್ಟೇ ಜಯ ಸಾಧಿಸಿದೆ. ಮೊದಲ ಟೆಸ್ಟ್ ನಲ್ಲಿ ಗೆಲುವು ಕೊಹ್ಲಿ ಪಡೆಯ ಕೈ ಹಿಡಿದ್ರೆ, ಕೊಹ್ಲಿ ತಮ್ಮ ನಾಯಕತ್ವದಲ್ಲಿ ತಂಡಕ್ಕೆ 22ನೇ ಗೆಲುವು ತಂದ ಕೀರ್ತಿಗೆ ಭಾಜನರಾಗಲಿದ್ದಾರೆ. ಈ ಮೂಲಕ ಟೀಮ್ ಇಂಡಿಯಾದ ಪರ ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆದ್ದ ಎರಡನೇ ನಾಯಕ ಎಂಬ ಹೆಗ್ಗಳಿಕೆ ಕೊಹ್ಲಿಯದ್ದಾಗಲಿದೆ. ಮೊದಲ ಸ್ಥಾನದಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಇದ್ದು, ಮಾಹಿ ಮುಂದಾಳತ್ವದಲ್ಲಿ ತಂಡ 27 ಜಯ ಕಂಡಿದೆ. ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ನಲ್ಲಿ ಶೇಕಡಾ 60 ರಷ್ಟು ಪಂದ್ಯಗಳನ್ನು ಗೆದ್ದ ದಾಖಲೆ ಹೊಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...