alex Certify
ಕನ್ನಡ ದುನಿಯಾ       Mobile App
       

Kannada Duniya

2 ನೇ ಟಿ -20: ಸರಣಿ ಜಯದ ವಿಶ್ವಾಸದಲ್ಲಿ ಕೊಹ್ಲಿ ಪಡೆ

ಗುವಾಹಟಿ: ಗುವಾಹಟಿಯ ಬರ್ಸಪರ ಕ್ರಿಕೆಟ್ ಮೈದಾನದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಇಂದು 2 ನೇ ಟಿ -20 ಪಂದ್ಯ ನಡೆಯಲಿದೆ.

ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ ಈಗಾಗಲೇ ಟೆಸ್ಟ್, ಏಕದಿನ ಸರಣಿಯನ್ನು ಜಯಿಸಿದ್ದು, ಟಿ -20 ಸರಣಿಯ ಮೊದಲ ಪಂದ್ಯವನ್ನೂ ಜಯಿಸಿದೆ. ಗುವಾಹಟಿಯ ಪಂದ್ಯವನ್ನು ಗೆಲ್ಲುವ ಮೂಲಕ, ಟಿ -20 ಸರಣಿಯನ್ನು ಜಯಿಸುವ ವಿಶ್ವಾಸದಲ್ಲಿದೆ.

ಡೇವಿಡ್ ವಾರ್ನರ್ ನೇತೃತ್ವದ ಆಸ್ಟ್ರೇಲಿಯಾ ತಂಡ ಕೂಡ ಪಂದ್ಯದ ಗೆಲುವಿಗೆ ಕಾರ್ಯತಂತ್ರ ರೂಪಿಸಿದೆ. ರಾಂಚಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಮಳೆಯ ಕಾರಣದಿಂದ ಡಕ್ವರ್ಥ್ ಲೂಯಿಸ್ ನಿಯಮ ಅಳವಡಿಸಲಾಗಿದ್ದು, ಭಾರತ ತಂಡ 9 ವಿಕೆಟ್ ಅಂತರದಿಂದ ಭರ್ಜರಿ ಜಯಗಳಿಸಿತ್ತು.

ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಭಾರತ ಬಲಿಷ್ಠವಾಗಿದ್ದು, ಆಸ್ಟ್ರೇಲಿಯಾ ನಿರಂತರ ಸೋಲಿನಿಂದ ಒತ್ತಡಕ್ಕೆ ಒಳಗಾಗಿದೆ.

ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದ್ದು, ಗೆಲುವಿಗಾಗಿ ಉಭಯ ತಂಡಗಳು ಕಾರ್ಯತಂತ್ರ ರೂಪಿಸಿವೆ. ಬರ್ಸಪರ ಕ್ರೀಡಾಂಗಣದಲ್ಲಿ ಇದೇ ಮೊದಲ ಬಾರಿಗೆ ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯ ನಡೆಯುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...