alex Certify
ಕನ್ನಡ ದುನಿಯಾ       Mobile App
       

Kannada Duniya

“ಭಾರತ-ಪಾಕ್ ದ್ವಿಪಕ್ಷೀಯ ಕ್ರಿಕೆಟ್ ಸರಣಿ ಅಸಾಧ್ಯ’’

vijay_en8wvyv

ಇಂಗ್ಲೆಂಡ್ ನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗೆ ದಿನಗಣನೆ ಶುರುವಾಗಿದೆ. ಜೂನ್ ನಾಲ್ಕರಂದು ಬರ್ಮಿಂಗ್ಹ್ಯಾಮ್ ನಲ್ಲಿ ಭಾರತ-ಪಾಕಿಸ್ತಾನ ತಂಡಗಳು ಸೆಣೆಸಾಡಲಿವೆ. ಇದನ್ನು ಇನ್ನೊಂದು ಯುದ್ಧವೆಂದೇ ಭಾರತ ಪರಿಗಣಿಸಿದೆ. ಈ ಮಧ್ಯೆ ಭಾರತ-ಪಾಕ್ ನಡುವೆ ದ್ವಿಪಕ್ಷೀಯ ಸರಣಿ ಸಾಧ್ಯವಿಲ್ಲವೆಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಈ ಬಗ್ಗೆ ಮಾತನಾಡಿದ ಕ್ರೀಡಾ ಸಚಿವ ವಿಜಯ್ ಗೋಯಲ್, ದುಷ್ಟ ಕೃತ್ಯಗಳನ್ನು ಪಾಕಿಸ್ತಾನ ಬಿಡುವವರೆಗೂ ದ್ವಿಪಕ್ಷೀಯ ಸರಣಿ ಸಾಧ್ಯವಿಲ್ಲವೆಂದು ಹೇಳಿದ್ದಾರೆ. ಕ್ರಿಕೆಟ್ ಹಾಗೂ ಭಯೋತ್ಪಾದನೆ ಒಟ್ಟಿಗೆ ನಡೆಯಲು ಸಾಧ್ಯವಿಲ್ಲವೆಂದು ಗೋಯಲ್ ಸ್ಪಷ್ಟಪಡಿಸಿದ್ದಾರೆ. ಜೂನ್ 4ರಂದು ಭಾರತ-ಪಾಕ್ ನಡುವೆ ಪಂದ್ಯ ನಡೆಯಲಿದೆ. ಈ ಬಗ್ಗೆ ಬಿಸಿಸಿಐ ಕೇಂದ್ರ ಸರ್ಕಾರದ ಅನುಮತಿ ಪಡೆದಿಲ್ಲ. ದ್ವಿಪಕ್ಷೀಯ ಕ್ರಿಕೆಟ್ ಸರಣಿ ಬಗ್ಗೆ ಒಪ್ಪಿಗೆ ಕೇಳಿತ್ತು. ಆದ್ರೆ ಒಪ್ಪಿಗೆ ನೀಡಲು ಸಾಧ್ಯವಿಲ್ಲವೆಂದು ಗೋಯಲ್ ಹೇಳಿದ್ದಾರೆ.

ಕೆಲ ವರ್ಷಗಳ ಹಿಂದೆ ಬಿಸಿಸಿಐ ಹಾಗೂ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಒಪ್ಪಂದವೊಂದನ್ನು ಮಾಡಿಕೊಂಡಿತ್ತು. ಅದ್ರಂತೆ ಒಂದು ಸರಣಿಯೂ ನಡೆದಿಲ್ಲ. ಇದ್ರಿಂದ ಅಪಾರ ಪ್ರಮಾಣದ ನಷ್ಟವಾಗಿದೆ. ಹಾಗಾಗಿ ದ್ವಿಪಕ್ಷೀಯ ಸರಣಿ ನಡೆಸಬೇಕೆಂದು ಬಿಸಿಸಿಐಗೆ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಹೇಳಿತ್ತು. ಮೇ.29ರಂದು ಬಿಸಿಸಿಐ ಜೊತೆ ಸಭೆ ನಡೆಯಬೇಕಿತ್ತು. ಸಭೆಗೂ ಮುನ್ನ ಗೋಯಲ್ ಬಿಸಿಸಿಐಗೆ ಸ್ಪಷ್ಟ ಸಂದೇಶ ರವಾನೆ ಮಾಡಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...