alex Certify
ಕನ್ನಡ ದುನಿಯಾ       Mobile App
       

Kannada Duniya

ಭಾರತ-ಪಾಕ್ ಮ್ಯಾಚ್ ಕೋಲ್ಕತ್ತಾಕ್ಕೆ ಶಿಫ್ಟ್

Edan gar

ನವದೆಹಲಿ: ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ, ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳ ನಡುವೆ ನಡೆಯಬೇಕಿದ್ದ ಹೈವೋಲ್ಟೇಜ್ ಪಂದ್ಯವನ್ನು ಕೋಲ್ಕತ್ತಾಕ್ಕೆ ಸ್ಥಳಾಂತರಿಸಲಾಗಿದೆ.

ಧರ್ಮಶಾಲಾದಲ್ಲಿ ಈ ಮೊದಲು ಪಂದ್ಯ ನಡೆಸಲು ನಿರ್ಧರಿಸಲಾಗಿತ್ತಾದರೂ ಭದ್ರತೆ ಕಾರಣಗಳಿಂದ ಕೋಲ್ಕತ್ತಾಕ್ಕೆ ಸ್ಥಳಾಂತರಿಸಲಾಗಿದೆ. ಧರ್ಮಶಾಲಾದಲ್ಲಿ ಆಡಲು ಪಾಕಿಸ್ತಾನ ನಿರಾಕರಿಸಿದ ಹಿನ್ನೆಲೆಯಲ್ಲಿ ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ಮಾರ್ಚ್ 19 ರಂದು ಪಂದ್ಯ ನಡೆಸಲು ಬಿಸಿಸಿಐ ತೀರ್ಮಾನಿಸಿದೆ. ಮೊದಲಿಗೆ ಧರ್ಮಶಾಲಾದಲ್ಲಿ ಪಂದ್ಯ ನಡೆಸಲು ಬಿಸಿಸಿಐ ನಿರ್ಧರಿಸಿ ವೇಳಾಪಟ್ಟಿಯನ್ನೂ ಪ್ರಕಟಿಸಿತ್ತು. ಆದರೆ, ಹಿಮಾಚಲ ಸಿಎಂ ವೀರಭದ್ರ ಸಿಂಗ್ ಭದ್ರತೆಯ ಕಾರಣಗಳನ್ನು ಮುಂದಿಟ್ಟಿದ್ದರು.

ನಂತರದಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧಿಕಾರಿಗಳು ಧರ್ಮಶಾಲಾ ಸ್ಟೇಡಿಯಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇದಾದ ನಂತರದಲ್ಲಿ ಧರ್ಮಶಾಲಾದಲ್ಲಿಯೇ ಪಂದ್ಯ ನಡೆಸಲು ಬಿಸಿಸಿಐ ತೀರ್ಮಾನಿಸಿತ್ತು. ಆದರೆ, ಪಾಕ್ ಬೇರೆ ಕಡೆ ಪಂದ್ಯ ಆಯೋಜಿಸಲು ಐಸಿಸಿಗೆ ಮನವಿ ಮಾಡಿತ್ತು.

ಐಸಿಸಿ ಸೂಚನೆ ಮೇರೆಗೆ ಬಿಸಿಸಿಐ, ಕೋಲ್ಕತ್ತಾದಲ್ಲಿ ಮಾರ್ಚ್ 19 ರಂದು ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಪಂದ್ಯವನ್ನು ನಡೆಸಲು ತೀರ್ಮಾನಿಸಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುವ ಪಂದ್ಯಕ್ಕೆ ಅಗತ್ಯ ಭದ್ರತೆ ಒದಗಿಸಲು ಅಲ್ಲಿನ ಆಡಳಿತ, ಪೊಲೀಸ್ ಇಲಾಖೆ ಸಮ್ಮತಿಸಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...