alex Certify
ಕನ್ನಡ ದುನಿಯಾ       Mobile App
       

Kannada Duniya

ಭಾರತ -ಪಾಕ್ ಕ್ರಿಕೆಟ್ ಪ್ರೇಮಿಗಳಿಗೊಂದು ಶಾಕಿಂಗ್ ನ್ಯೂಸ್

cricke darmashala

ನವದೆಹಲಿ: ಸಾಂಪ್ರದಾಯಿಕ ಎದುರಾಳಿಗಳಾದ ಭಾರತ, ಪಾಕಿಸ್ತಾನ ಕ್ರಿಕೆಟ್ ತಂಡಗಳ ನಡುವೆ ನಡೆಯುವ ಪಂದ್ಯಗಳನ್ನು ಹೈ ವೋಲ್ಟೇಜ್ ಮ್ಯಾಚ್ ಎಂದೇ ಕರೆಯಲಾಗುತ್ತದೆ. ಕ್ರಿಕೆಟ್ ಜಗತ್ತಿನಲ್ಲಿ ಉಭಯ ತಂಡಗಳ ನಡುವೆ ನಡೆಯುವ ಪಂದ್ಯಗಳಿಗೆ ಭಾರೀ ನಿರೀಕ್ಷೆ ಇರುತ್ತದೆ.

ಕಳೆದ ವಾರವಷ್ಟೇ ನಡೆದ ಏಷ್ಯಾಕಪ್ ಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡವನ್ನು ಭಾರತ ಬಗ್ಗುಬಡಿದಿತ್ತು. ಇದೇ ಮಾರ್ಚ್ ನಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಕಿಸ್ತಾನ ತಂಡದೊಂದಿಗೆ ಭಾರತ ಸೆಣಸಬೇಕಿತ್ತು. ಆದರೆ, ಆ ಪಂದ್ಯ ನಡೆಯುವುದು ಡೌಟ್ ಎನ್ನಲಾಗಿದೆ. ಮಾರ್ಚ್ 19ರಂದು ಧರ್ಮಶಾಲಾದಲ್ಲಿ ಆಯೋಜನೆಗೊಂಡಿರುವ ಹೈವೋಲ್ಟೇಜ್ ಪಂದ್ಯಕ್ಕೆ ಭದ್ರತೆ ಒದಗಿಸುವುದು ಕಷ್ಟ ಎಂಬುದೇ ಇದಕ್ಕೆ ಕಾರಣವೆನ್ನಲಾಗಿದೆ.

ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್, ಧರ್ಮಶಾಲಾದಲ್ಲಿ ಪಾಕ್ ಎದುರಿನ ಪಂದ್ಯಕ್ಕೆ ಭದ್ರತೆ ಒದಗಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವಾಲಯಕ್ಕೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ. ಬೇರೆ ದೇಶದ ತಂಡಗಳ ಪಂದ್ಯವನ್ನು ಏರ್ಪಡಿಸಲು ವಿರೋಧವಿಲ್ಲ ಎಂದು ಹೇಳಿದ್ದಾರೆ.

ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ಇದಕ್ಕೆ ಪ್ರತಿಕ್ರಿಯೆ ನೀಡಿದ್ದು, ಒಂದು ವರ್ಷದ ಹಿಂದೆಯೇ ಸ್ಥಳ ನಿಗದಿ ಮಾಡಿ, 6 ತಿಂಗಳ ಹಿಂದೆಯೇ ಅಂತಿಮಪಟ್ಟಿ ಪ್ರಕಟಿಸಲಾಗಿದೆ. ಟಿಕೆಟ್ ಸಹ ಮಾರಾಟವಾಗಿವೆ. ಕೊನೆ ಕ್ಷಣದಲ್ಲಿ ಈ ರೀತಿ ನೆಪವೊಡ್ಡಿ ಪಂದ್ಯಕ್ಕೆ ತಡೆ ನೀಡುವುದು ಸರಿಯಲ್ಲ ಎಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...