alex Certify
ಕನ್ನಡ ದುನಿಯಾ       Mobile App
       

Kannada Duniya

ಈಡೇರಲಿಲ್ಲ ಭಾರತೀಯರ ಕನಸು : ಮತ್ತೆ ಸರಣಿ ಸೋತ ಟೀಂ ಇಂಡಿಯಾ

ದಕ್ಷಿಣ ಆಫ್ರಿಕಾ ವಿರುದ್ಧ ಸೆಂಚುರಿಯನ್ ನಲ್ಲಿ ನಡೆದ ಎರಡನೇ ಪಂದ್ಯದಲ್ಲೂ ಟೀಂ ಇಂಡಿಯಾ ಸೋಲುಂಡಿದೆ. ಈ ಮೂಲಕ ಟೆಸ್ಟ್ ಸರಣಿಯನ್ನು ದಕ್ಷಿಣ ಆಫ್ರಿಕಾ ಮಡಿಲಿಗೆ ಹಾಕಿದೆ. ಎರಡನೇ ಪಂದ್ಯಲ್ಲಿ 135 ರನಗ ಗಳ ಭರ್ಜರಿ ಗೆಲುವು ಸಾಧಿಸಿ 2-0 ಅಂಕಗಳಿಸಿರುವ ದಕ್ಷಿಣ ಆಫ್ರಿಕಾ ಸರಣಿ ಗೆದ್ದು ಬೀಗಿದೆ.

ಟಾಸ್ ಗೆದ್ದು ಮೊದಲ ಇನ್ನಿಂಗ್ಸ್ ಶುರು ಮಾಡಿದ್ದ ದಕ್ಷಿಣ ಆಫ್ರಿಕಾ 335 ರನ್ ಗಳಿಗೆ ಆಲ್ ಔಟ್ ಆಗಿತ್ತು. 335 ರನ್ ಗುರಿ ಬೆನ್ನು ಹತ್ತಿದ ಟೀಂ ಇಂಡಿಯಾ 307 ರನ್ ಗಳಿಸಿತ್ತು. ಮೊದಲ ಇನ್ನಿಂಗ್ಸ್ ನಲ್ಲಿ 28 ರನ್ ಗಳ ಹಿನ್ನೆಡೆ ಸಾಧಿಸಿದ್ದ ದಕ್ಷಿಣ ಆಫ್ರಿಕಾವನ್ನು ಭಾರತ ಎರಡನೇ ಇನ್ನಿಂಗ್ಸ್ ನಲ್ಲಿ 258 ರನ್ ಗೆ ಕಟ್ಟಿ ಹಾಕಿತ್ತು.

287 ರನ್ ಗಳ ಗೆಲುವಿನ ಗುರಿ ಬೆನ್ನು ಹತ್ತಿದ ಭಾರತ 151 ರನ್ ಗಳಿಗೆ ತನ್ನೆಲ್ಲ ವಿಕೆಟ್ ಒಪ್ಪಿಸಿ ದಕ್ಷಿಣ ಆಫ್ರಿಕಾ ಮುಂದೆ ಮಂಡಿಯೂರಿದೆ. ಮೊದಲ ಇನ್ನಿಂಗ್ಸ್ ನಲ್ಲಿ 153 ರನ್ ಗಳಿಸಿದ್ದ ಕೊಹ್ಲಿ ಎರಡನೇ ಇನ್ನಿಂಗ್ಸ್ ನಲ್ಲಿ ಕೇವಲ 5 ರನ್ ಗಳಿಸಿ ಭಾರತೀಯರಿಗೆ ನಿರಾಸೆ ಮೂಡಿಸಿದ್ರು. ಈ ಮೂಲಕ 1992ರಿಂದ ಕಾಯ್ತಿದ್ದ ಭಾರತೀಯರಿಗೆ ಟೀಂ ಇಂಡಿಯಾ ಮತ್ತೆ ನಿರಾಸೆ ಮೂಡಿಸಿದೆ. ದಕ್ಷಿಣ ಆಫ್ರಿಕಾ ನೆಲದಲ್ಲಿ ಮತ್ತೆ ಟೆಸ್ಟ್ ಸರಣಿ ಸೋತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...