alex Certify
ಕನ್ನಡ ದುನಿಯಾ       Mobile App
       

Kannada Duniya

2ನೇ ಟೆಸ್ಟ್ ಗೂ ಮುನ್ನ ಪಾರ್ಟಿಯಲ್ಲಿ ಮಿಂಚಿದ ಟೀಂ ಇಂಡಿಯಾ

ದಕ್ಷಿಣ ಆಫ್ರಿಕಾ ವಿರುದ್ಧ ಜನವರಿ 13ರಿಂದ ನಡೆಯುವ ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾ ಸಿದ್ಧವಾಗಿದೆ. ಮೂರು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಈಗಾಗಲೇ ದಕ್ಷಿಣ ಆಫ್ರಿಕಾ 1-0 ಅಂತರದಿಂದ ಮುಂದಿದೆ. ಹಾಗಾಗಿ ಮುಂದಿನ ಪಂದ್ಯವನ್ನು ಟೀಂ ಇಂಡಿಯಾ ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ.

ಪಂದ್ಯ ಆರಂಭಕ್ಕೂ ಮುನ್ನ ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ ಭಾರತ ತಂಡದ ಆಟಗಾರರನ್ನು ಆಹ್ವಾನಿಸಿತ್ತು. ಜೊಹಾನ್ಸಬರ್ಗ್ ನಲ್ಲಿರುವ ಇಂಡಿಯಾ ಹೌಸ್ ನಲ್ಲಿ ಭೋಜನ ಕೂಟವನ್ನು ಏರ್ಪಡಿಸಲಾಗಿತ್ತು. ಇದ್ರಲ್ಲಿ ಪಾಲ್ಗೊಂಡಿದ್ದ ಆಟಗಾರರು ಇನ್ಸ್ಟ್ರಾಗ್ರಾಮ್ ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಟೀಂ ಇಂಡಿಯಾ ಹಿಟ್ ಮ್ಯಾನ್ ಪತ್ನಿ ರಿತಿಕಾ ಜೊತೆ ಫೋಟೋಕ್ಕೆ ಫೋಸ್ ನೀಡಿದ್ದಾರೆ. ಇನ್ಸ್ಟ್ರಾಗ್ರಾಮ್ ನಲ್ಲಿ ಫೋಟೋ ಹಾಕಿರುವ ರೋಹಿತ್ ಶರ್ಮಾ ಮೈ ವೈಫ್ ಎಂದು ಶೀರ್ಷಿಕೆ ಹಾಕಿದ್ದಾರೆ.

ಬೌಲರ್ ಭುವನೇಶ್ವರ್ ಕುಮಾರ್ ತಮ್ಮ ಪತ್ನಿ ನುಪೂರ್ ಜೊತೆ ಕ್ಯಾಮರಾಕ್ಕೆ ಫೋಸ್ ನೀಡಿದ್ದಾರೆ. ಚೇತೇಶ್ವರ್ ಪೂಜಾರ್, ಹಾರ್ದಿಕ್ ಪಟೇಲ್, ರವಿಶಾಸ್ತ್ರಿ ಸೇರಿದಂತೆ ಅನೇಕರು ಇನ್ಸ್ಟ್ರಾಗ್ರಾಮ್ ನಲ್ಲಿ ಭೋಜನ ಕೂಟದ ಫೋಟೋವನ್ನು ಹಾಕಿದ್ದಾರೆ.

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...