alex Certify
ಕನ್ನಡ ದುನಿಯಾ       Mobile App
       

Kannada Duniya

ಕೊಹ್ಲಿ ಪಡೆಗೆ ಸಿಗ್ತಿದೆ ಕೋಟಿಗಟ್ಟಲೆ ಹಣ

test-rankingನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು 3-0 ಅಂತರದಲ್ಲಿ ಗೆಲ್ಲುವ ಮೂಲಕ ಕ್ಲೀನ್ ಸ್ವೀಪ್ ಮಾಡಿರುವ ಭಾರತ ತಂಡ ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನಕ್ಕೇರಿದೆ.

ಇದ್ರಿಂದ ಪಾಕಿಸ್ತಾನಕ್ಕೆ ಮುಖಭಂಗವಾದಂತಾಗಿದೆ. ಐಸಿಸಿ ನಿಯಮದ ಪ್ರಕಾರ ರ್ಯಾಂಕಿಂಗ್ ನಲ್ಲಿ ಮೊದಲ ಸ್ಥಾನದಲ್ಲಿರುವ ತಂಡ 1 ಮಿಲಿಯನ್ ಡಾಲರ್ ಹಣವನ್ನು ತನ್ನದಾಗಿಸಿಕೊಳ್ಳಲಿದೆ. ಎರಡನೇ ಸ್ಥಾನದಲ್ಲಿರುವ ತಂಡಕ್ಕೆ 500,000 ಡಾಲರ್, ಮೂರನೇ ಸ್ಥಾನದಲ್ಲಿರುವವರಿಗೆ 200,000 ಡಾಲರ್ ಹಾಗೂ ನಾಲ್ಕನೇ ಸ್ಥಾನ ಪಡೆದ ತಂಡಕ್ಕೆ 100,000 ಡಾಲರ್ ಹಣ ನೀಡಲಾಗುತ್ತದೆ.

ಅದರಂತೆ ಕೊಹ್ಲಿ ಪಡೆಗೆ 6.7 ಕೋಟಿ ರೂಪಾಯಿ ದೊರೆಯಲಿದೆ. ಅಗ್ರಸ್ಥಾನದಲ್ಲಿರುವ ಭಾರತ 118 ಪಾಯಿಂಟ್ ಗಳಿಸಿದ್ರೆ, ಎರಡನೇ ಸ್ಥಾನದಲ್ಲಿರುವ ಪಾಕಿಸ್ತಾನದ ಬಳಿ 111 ಪಾಯಿಂಟ್ ಗಳಿವೆ. ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ತಲಾ 108 ಪಾಯಿಂಟ್ ಗಳಿಸಿವೆ. ಇದೇ ತಿಂಗಳಿನಲ್ಲಿ ಪಾಕಿಸ್ತಾನ, ವಿಂಡೀಸ್ ಹಾಗೂ ಯುಎಇ ಜೊತೆ ತ್ರಿಕೋನ ಸರಣಿಯನ್ನಾಡಲಿದೆ.

ಸದ್ಯದಲ್ಲೇ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳು ಭಾರತ ಪ್ರವಾಸ ಕೈಗೊಳ್ಳಲಿವೆ. ನಿರಂತರವಾಗಿ ಪಂದ್ಯಗಳು ನಡೆಯುವುದರಿಂದ ಅಗ್ರಸ್ಥಾನಕ್ಕಾಗಿ ಭಾರೀ ಪೈಪೋಟಿ ಏರ್ಪಡಲಿದೆ. ಇನ್ನು ಟೆಸ್ಟ್ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನಕ್ಕೇರಲು ತಂಡವನ್ನು ಮುನ್ನಡೆಸಿದ ನಾಯಕ ವಿರಾಟ್ ಕೊಹ್ಲಿ ಅವರನ್ನು ಕೂಡ ಗೌರವಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...