alex Certify
ಕನ್ನಡ ದುನಿಯಾ       Mobile App
       

Kannada Duniya

ವಿರಾಟ್ ಕೊಹ್ಲಿಗಿಂದು ಮಹತ್ವದ ಪಂದ್ಯ, ಏಕೆ ಗೊತ್ತಾ?

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಇಂದು ಮಹತ್ವದ ದಿನ. ಇಂಗ್ಲೆಂಡ್ ವಿರುದ್ಧ ಇಂದು ನಡೆಯಲಿರುವ ಏಕದಿನ ಕ್ರಿಕೆಟ್ ಪಂದ್ಯ ಕೊಹ್ಲಿ ನಾಯಕತ್ವದ 50ನೇ ಪಂದ್ಯವಾಗಿದ್ದು, ಇದರ ಫಲಿತಾಂಶ ಕ್ರಿಕೆಟ್ ಪ್ರೇಮಿಗಳ ಕುತೂಹಲ ಕೆರಳಿಸಿದೆ.

2017 ರಲ್ಲಿ ಭಾರತದಲ್ಲಿ ನಡೆದಿದ್ದ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಟೀಂ ಇಂಡಿಯಾ ನಾಯಕರಾಗಿ ಕಾರ್ಯರಂಭ ಮಾಡಿದ್ದ ವಿರಾಟ್ ಕೊಹ್ಲಿ, ತಮ್ಮ ನಾಯಕತ್ವದ 50ನೇ ಏಕದಿನ ಪಂದ್ಯವನ್ನು ಇಂಗ್ಲೆಂಡ್ ವಿರುದ್ಧ ಅವರ ತವರಿನಲ್ಲಿಯೇ ಆಡುತ್ತಿರುವುದು ವಿಶೇಷ.

ಮತ್ತೊಂದು ಗಮನಾರ್ಹ ಸಂಗತಿಯೆಂದರೆ ಟೀಂ ಇಂಡಿಯಾ ನಾಯಕರಾಗಿದ್ದ ಮಹೇಂದ್ರ ಸಿಂಗ್ ಧೋನಿ, ಇಂದಿನ ಪಂದ್ಯದಲ್ಲಿ ಹಲವು ದಾಖಲೆಗಳನ್ನು ಮಾಡುವ ಅವಕಾಶ ಹೊಂದಿದ್ದಾರೆ. ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಯ ಮೊದಲ ಪಂದ್ಯ ಇಂದು ನಡೆಯುತ್ತಿದ್ದು, ಕ್ರೀಡಾಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...