alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೊಂದು ದಾಖಲೆ ಬರೆದ ಧೋನಿ

ಬ್ರಿಸ್ಟಲ್ ಅಂಗಳದಲ್ಲಿ ನಿನ್ನೆ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ನೀಡಿದೆ. ತವರಿನ ಅಂಗಳದಲ್ಲಿ ಆಂಗ್ಲರ ಪಡೆ ಟಿ-20 ಸರಣಿಯಲ್ಲಿ ಸೋಲು ಕಂಡಿದೆ. ಮೂರನೇ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ಇತಿಹಾಸದ ಪುಟ ಸೇರಿದ್ದಾರೆ.

ಧೋನಿ, ಇಂಗ್ಲೆಂಡ್ ವಿರುದ್ಧ ಮೂರನೇ ಪಂದ್ಯದಲ್ಲಿ ವಿಕ್ರಮ ಸಾಧಿಸಿದ್ದಾರೆ. ಮಾಹಿ ಒಂದೇ ಇನ್ನಿಂಗ್ಸ್ ನಲ್ಲಿ ಐದು ಕ್ಯಾಚ್ ಪಡೆಯುವ ಮೂಲಕ ದಾಖಲೆ ಬರೆದಿದ್ದಾರೆ. ಈ ಮೂಲಕ ಚುಟುಕು ಕ್ರಿಕೆಟ್ ನಲ್ಲಿ ಈ ಸಾಧನೆ ಮಾಡಿದ ವಿಶ್ವದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಲ್ಲದೆ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಧೋನಿ ವಿಕೆಟ್ ಹಿಂದೆ ನಿಂತು 50 ಕ್ಕೂ ಹೆಚ್ಚು ಕ್ಯಾಚ್ ಪಡೆದು ಇತಿಹಾಸ ನಿರ್ಮಿಸಿದ್ದಾರೆ.

ಧೋನಿ ಚುಟುಕು ಕ್ರಿಕೆಟ್ ನಲ್ಲಿ ಸದ್ಯ 87 ವಿಕೆಟ್ ಕೆಡವಿದ್ದಾರೆ. ಇದ್ರಲ್ಲಿ 54 ಕ್ಯಾಚ್ ಹಾಗೂ 33 ಸ್ಟಂಪಿಂಗ್ ಸೇರಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...