alex Certify
ಕನ್ನಡ ದುನಿಯಾ       Mobile App
       

Kannada Duniya

ಮೂರನೇ ಟೆಸ್ಟ್ ನಲ್ಲಿ ಟೀಂ ಇಂಡಿಯಾಕ್ಕೆ ಭರ್ಜರಿ ಗೆಲುವು

ಟ್ರೆಂಡ್ ಬ್ರಿಡ್ಜ್ ಮೈದಾನದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲುವಿನ ನಗೆ ಬೀರಿದೆ. ಇಂಗ್ಲೆಂಡ್ ವಿರುದ್ಧ 203 ರನ್ ಗಳ ಗೆಲುವು ಸಾಧಿಸಿದೆ. ಭಾರತ ಇಂಗ್ಲೆಂಡ್ ಗೆ 521 ರನ್ ಗಳ ಗುರಿ ನೀಡಿತ್ತು. ಎರಡನೇ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ 317 ರನ್ ಗಳಿಸಲಷ್ಟೇ ಶಕ್ತವಾಯ್ತು.

ಇಂಗ್ಲೆಂಡ್ ಬ್ಯಾಟ್ಸ್ ಮನ್ ಗಳನ್ನು ಕಟ್ಟಿಹಾಕುವಲ್ಲಿ ಜಸ್ಪ್ರೀತ್ ಬೂಮ್ರಾ ಪಾತ್ರ ಹೆಚ್ಚಿದೆ. 85 ರನ್ ನೀಡಿದ ಬೂಮ್ರಾ, ಇಂಗ್ಲೆಂಡ್ ನ 5 ವಿಕೆಟ್ ಕಬಳಿಸಿದ್ದಾರೆ. ಇಶಾಂತ್ ಶರ್ಮಾ 2, ಅಶ್ವಿನ್ ಮೊಹಮ್ಮದ್ ಶಮಿ ಹಾಗೂ ಹಾರ್ದಿಕ್ ಪಾಂಡ್ಯ ಒಂದೊಂದು ವಿಕೆಟ್ ಕಬಳಿಸಿದ್ದಾರೆ.

ಮೊದಲ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ 161 ರನ್ ಗಳಿಸಿತ್ತು. ಗುರಿ ಬೆನ್ನು ಹತ್ತಿದ ಭಾರತ ಭರ್ಜರಿ ಪ್ರದರ್ಶನ ತೋರಿತ್ತು. ವಿರಾಟ್ ಕೊಹ್ಲಿ 103 ರನ್ ಬಾರಿಸಿ ವೃತ್ತಿ ಜೀವನದ 23 ನೇ ಶತಕ ಸಿಡಿಸಿದ್ದರು. ಚೇತೇಶ್ವರ್ ಪೂಜಾರ್ 72 ರನ್ ಗಳಿಸಿ ತಂಡಕ್ಕೆ ಆಸರೆಯಾಗಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...