alex Certify
ಕನ್ನಡ ದುನಿಯಾ       Mobile App
       

Kannada Duniya

ಇಂಗ್ಲೆಂಡ್ ನೆಲದಲ್ಲಿ ಇಂದು ನಡೆಯಲಿದೆ ನಿರ್ಣಾಯಕ ಪಂದ್ಯ

ಭಾರತ-ಇಂಗ್ಲೆಂಡ್ ವಿರುದ್ಧ ಜುಲೈ 17 ರಂದು ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯ ನಡೆಯಲಿದೆ. ಹೆಡಿಂಗ್ಲೆಯ ಲೀಡ್ಸ್ ಅಂಗಳದಲ್ಲಿ ಮಂಗಳವಾರ ಮೂರನೇ ಪಂದ್ಯ ನಡೆಯಲಿದೆ. ನಡೆದ ಎರಡು ಪಂದ್ಯಗಳಲ್ಲಿ ಇಂಗ್ಲೆಂಡ್ ಹಾಗೂ ಭಾರತ ತಲಾ ಒಂದೊಂದು ಪಂದ್ಯ ಗೆದ್ದು ಸಮಬಲ ಸಾಧಿಸಿವೆ.

ಇಂದು ಭಾರತೀಯ ಸಮಯ ಸಂಜೆ 5 ಗಂಟೆಗೆ ಪಂದ್ಯ ಶುರುವಾಗಲಿದೆ. ಬೌಲಿಂಗ್ ಹಾಗೂ ಮಧ್ಯಮ ಕ್ರಮಾಂಕದಲ್ಲಿ ಸಮಸ್ಯೆ ಹೊಂದಿರುವ ಭಾರತ ಗೆಲುವಿಗೆ ರಣತಂತ್ರ ರೂಪಿಸುತ್ತಿದೆ. ಟಿ-20 ಸರಣಿ ತಮ್ಮದಾಗಿಸಿಕೊಂಡಿರುವ ಭಾರತ ಕೊನೆಯ ಏಕದಿನ ಪಂದ್ಯವನ್ನು ಗೆದ್ದು ಸರಣಿ ಗೆಲುವು ಸಾಧಿಸುವ ತವಕದಲ್ಲಿದೆ.

ಒಂದು ವೇಳೆ ಈ ಏಕದಿನ ಸರಣಿ ಟೀಂ ಇಂಡಿಯಾ ಪಾಲಾದ್ರೆ ಇಂಡಿಯಾ ಸತತ 10ನೇ ಸರಣಿಯನ್ನು ತನ್ನ ಮಡಿಲಿಗೆ ಹಾಕಿಕೊಂಡ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಕೆ.ಎಲ್. ರಾಹುಲ್ ಉತ್ತಮ ಪ್ರದರ್ಶನ ನೀಡುವ ಅಗತ್ಯವಿದ್ದು, ವೇಗಿ ಭುವನೇಶ್ವರ್ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...