alex Certify
ಕನ್ನಡ ದುನಿಯಾ       Mobile App
       

Kannada Duniya

ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಭರ್ಜರಿ ಜಯ

ಇಂಗ್ಲೆಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದ್ದು,ಈ ಮೂಲಕ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 49.5 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 268 ರನ್ ಗಳಿಸಿತು. ಟೀಮ್ ಇಂಡಿಯಾದ ಕುಲದೀಪ್ ಯಾದವ್ ಒಬ್ಬರೇ ಆರು ವಿಕೆಟ್ ಕಬಳಿಸಿದ್ದು, ಇಂಗ್ಲೆಂಡ್ ತಂಡಕ್ಕೆ ಕಡಿವಾಣ ಹಾಕಿದರು.

ನಂತರ ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಆಟಗಾರರು ಇನ್ನೂ 59 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ರನ್ ಬಾರಿಸಿದರು. ರೋಹಿತ್ ಶರ್ಮಾ ಶತಕ ಗಳಿಸಿದರೆ ವಿರಾಟ್ ಕೊಹ್ಲಿ 75 ರನ್ ಬಾರಿಸಿದರು. 8 ವಿಕೆಟ್ ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿರುವ ಟೀಮ್ ಇಂಡಿಯಾ ಏಕದಿನ ಸರಣಿಯನ್ನು ಕೈವಶ ಮಾಡಿಕೊಳ್ಳುವ ನಿರೀಕ್ಷೆಯಲ್ಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...