alex Certify
ಕನ್ನಡ ದುನಿಯಾ       Mobile App
       

Kannada Duniya

ಇಂಗ್ಲೆಂಡ್ ತಲುಪಿದ ಟೀಂ ಇಂಡಿಯಾ

ಟೀಂ ಇಂಡಿಯಾ 81 ದಿನಗಳ ಪ್ರವಾಸಕ್ಕಾಗಿ ಇಂಗ್ಲೆಂಡ್ ತಲುಪಿದೆ. ಇಂಗ್ಲೆಂಡ್ ಮತ್ತು ಐರ್ಲೆಂಡ್ ವಿರುದ್ಧ ಟೀಂ ಇಂಡಿಯಾ ಮೈದಾನಕ್ಕಿಳಿಯಲಿದೆ. ಪ್ರವಾಸಕ್ಕೂ ಮುನ್ನ ಮಾತನಾಡಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ದಕ್ಷಿಣ ಆಫ್ರಿಕಾ ಪ್ರವಾಸದ ನಂತ್ರ ಕಠಿಣ ಪಂದ್ಯಗಳನ್ನು ಎದುರಿಸಿದೆ. ಇಂಗ್ಲೆಂಡ್ ಪ್ರವಾಸದಲ್ಲಿ ಕೂಡ ಗೆಲುವು ನಮ್ಮದೆ ಎಂದಿದ್ದರು.

ಜುಲೈ 3ರಿಂದ ಶುರುವಾಗಲಿರುವ ಇಂಗ್ಲೆಂಡ್ ಪಂದ್ಯಾವಳಿಗಿಂತ ಮೊದಲು ಜೂನ್ 27 ಹಾಗೂ ಜೂನ್ 29ರಂದು ಐರ್ಲೆಂಡ್ ವಿರುದ್ಧ ಭಾರತ 2 ಟಿ-20 ಪಂದ್ಯಗಳನ್ನಾಡಲಿದೆ.

ಇಂಗ್ಲೆಂಡ್ ತಲುಪಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ರವಿ ಶಾಸ್ತ್ರಿ ಹಾಗೂ ತಂಡದ ಇತರ ಆಟಗಾರರು ಪ್ರಯಾಣದ ಸುಂದರ ಕ್ಷಣಗಳ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಕೊಹ್ಲಿ ಟ್ವಿಟರ್ ನಲ್ಲಿ ತಂಡದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಬಿಸಿಸಿಐ ಕೂಡ ವಿಮಾನ ನಿಲ್ದಾಣದಲ್ಲಿ ತಂಡದ ಆಟಗಾರರು ಒಟ್ಟಿಗಿರುವ ಫೋಟೋವನ್ನು ಅಧಿಕೃತ ಟ್ವಿಟರ್ ಅಕೌಂಟ್ ನಲ್ಲಿ ಹಂಚಿಕೊಂಡಿದೆ. ವಿರಾಟ್ ಕೊಹ್ಲಿ ಅಭಿಮಾನಿ ಜೊತೆಗಿರುವ ಫೋಟೋವನ್ನು ಬಿಸಿಸಿಐ ಹಂಚಿಕೊಂಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...