alex Certify
ಕನ್ನಡ ದುನಿಯಾ       Mobile App
       

Kannada Duniya

ಟೀಂ ಇಂಡಿಯಾ ಗೆಲುವನ್ನು ಕೇರಳ ಜನತೆಗೆ ಅರ್ಪಿಸಿದ ಕೊಹ್ಲಿ

ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ಪರಾಭವ ಅನುಭವಿಸುವ ಮೂಲಕ ಮುಖಭಂಗಕ್ಕೊಳಗಾಗಿದ್ದ ಟೀಂ ಇಂಡಿಯಾ, ಮೂರನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದೆ.

ಇಂದಿನ ಗೆಲುವಿನ ಮೂಲಕ ಟೀಂ ಇಂಡಿಯಾ ಸರಣಿಯನ್ನು ಜೀವಂತವಾಗಿರಿಸಿದ್ದು, ಮುಂದಿನ ಪಂದ್ಯಗಳ ಕುರಿತು ಕ್ರಿಕೆಟ್ ಅಭಿಮಾನಿಗಳಲ್ಲಿ ಕುತೂಹಲ ಮೂಡಿದೆ.

ಈ ಮಧ್ಯೆ 3ನೇ ಟೆಸ್ಟ್ ಗೆಲುವಿನ ಕುರಿತು ಪ್ರತಿಕ್ರಿಯೆ ನೀಡಿರುವ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಇಂದಿನ ಗೆಲುವು ತಂಡದ ಎಲ್ಲ ಸದಸ್ಯರಿಗೆ ಸಲ್ಲಬೇಕಾಗಿದೆ ಎಂದು ತಿಳಿಸಿದ್ದಾರಲ್ಲದೆ, ಈ ಜಯವನ್ನು ಕೇರಳದ ಪ್ರವಾಹಪೀಡಿತ ಸಂತ್ರಸ್ತರಿಗೆ ಅರ್ಪಿಸುತ್ತೇನೆ. ಹಾಗೂ ಈ ಪಂದ್ಯದಿಂದ ಬರುವ ಸಂಭಾವನೆಯನ್ನು ಕೇರಳ ಸರ್ಕಾರಕ್ಕೆ ನೀಡಲಿದ್ದೇವೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...