alex Certify
ಕನ್ನಡ ದುನಿಯಾ       Mobile App
       

Kannada Duniya

ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ನಲ್ಲಿ ಕೊಹ್ಲಿ ಶತಕದಾಟ….

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ನಲ್ಲಿ ಶತಕ ಬಾರಿಸಿದ್ದಾರೆ. ಸೆಂಚುರಿಯನ್ ನಲ್ಲಿ ಈ ಪಂದ್ಯ ನಡೆಯುತ್ತಿದೆ. ನಾಯಕನಿಗೆ ತಕ್ಕ ಆಟವಾಡಿದ ಕೊಹ್ಲಿ, 21ನೇ ಟೆಸ್ಟ್ ಶತಕ ಸಿಡಿಸಿದ್ರು.

ನಿನ್ನೆ 85ರನ್ ಗಳಿಸಿ ಅಜೇಯರಾಗಿ ಉಳಿದಿದ್ದ ಕೊಹ್ಲಿ, ಇಂದು ಕೂಡ ಜವಾಬ್ಧಾರಿಯುತ ಆಟವಾಡಿದ್ರು. ಇದು ವಿದೇಶಗಳಲ್ಲಿ ಕೊಹ್ಲಿ ಬಾರಿಸಿರೋ 11ನೇ ಟೆಸ್ಟ್ ಶತಕ. ಕೇಪ್ ಟೌನ್ ನಲ್ಲಿ ನಡೆದ ಮೊದಲ ಟೆಸ್ಟ್ ನಲ್ಲಿ ಭಾರತ ಸೋಲು ಅನುಭವಿಸಿತ್ತು.

ವೇಗದ ಬೌಲರ್ ಭುವನೇಶ್ವರ್ ಕುಮಾರ್ ಅವರನ್ನು ತಂಡದಿಂದ ಹೊರಗಿಟ್ಟಿರುವುದಕ್ಕೆ ಕೊಹ್ಲಿ ಟೀಕೆಗೆ ಗುರಿಯಾಗಿದ್ದರು. ಮೊದಲ ಟೆಸ್ಟ್ ನಲ್ಲಿ ಕೊಹ್ಲಿ ಕಳಪೆ ಬ್ಯಾಟಿಂಗ್ ಮಾಡಿದ್ದಕ್ಕೆ ಸಾಮಾಜಿಕ ತಾಣಗಳಲ್ಲಿ ಟ್ರೋಲ್ ಮಾಡಲಾಗಿತ್ತು.

ಮದುವೆ ನಂತರ ಮೊದಲ ಪಂದ್ಯ ಆಡಿದ್ದ ಕೊಹ್ಲಿಯನ್ನು ಅಭಿಮಾನಿಗಳೇ ತರಾಟೆಗೆ ತೆಗೆದುಕೊಂಡಿದ್ದರು. ಆದ್ರೆ ಟೀಕಾಕಾರಿಗೆ ಕೊಹ್ಲಿ ತಮ್ಮ ಬ್ಯಾಟ್ ನಿಂದ್ಲೇ ಉತ್ತರ ಕೊಟ್ಟಿದ್ದಾರೆ. ಭರ್ಜರಿ ಶತಕ ಸಿಡಿಸುವ ಮೂಲಕ ತಂಡಕ್ಕೆ ಆಧಾರವಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...