alex Certify
ಕನ್ನಡ ದುನಿಯಾ       Mobile App
       

Kannada Duniya

ಗೆಲುವಿನ ಖುಷಿಯಲ್ಲಿ ಯಾರ ಗಮನಕ್ಕೂ ಬರಲಿಲ್ಲ ಧೋನಿಯ ಮತ್ತೊಂದು ದಾಖಲೆ

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ಟೀಂ ಇಂಡಿಯಾದ ಗೆಲುವಿನ ರೂವಾರಿಗಳಂದ್ರೆ ಭುವನೇಶ್ವರ್ ಕುಮಾರ್ ಹಾಗೂ ಶಿಖರ್ ಧವನ್. ಭುವಿ 5 ವಿಕೆಟ್ ಪಡೆದ್ರೆ, ಧವನ್ 39 ಬಾಲ್ ಗಳಲ್ಲಿ 72 ರನ್ ಬಾರಿಸಿ ತಂಡಕ್ಕೆ ಆಸರೆಯಾದ್ರು.

ಇವರಿಬ್ಬರ ಅಬ್ಬರದಲ್ಲಿ ಮಹೇಂದ್ರ ಸಿಂಗ್ ಧೋನಿ ಮಾಡಿದ ದಾಖಲೆ ಯಾರ ಗಮನಕ್ಕೂ ಬಂದಿಲ್ಲ. ಧೋನಿ ನಿನ್ನೆಯ ಪಂದ್ಯದಲ್ಲಿ ಶ್ರೀಲಂಕಾದ ಕುಮಾರ ಸಂಗಕ್ಕರ ದಾಖಲೆಯನ್ನು ಸರಿಗಟ್ಟಿದ್ದಾರೆ. ಸಂಗಕ್ಕರ ಟಿ-20 ಪಂದ್ಯದಲ್ಲಿ ಅತಿ ಹೆಚ್ಚು ಕ್ಯಾಚ್ ಪಡೆದ ದಾಖಲೆ ಮಾಡಿದ್ದರು.

ಸಂಗಕ್ಕರ 254 ಪಂದ್ಯಗಳಿಂದ 133 ಕ್ಯಾಚ್ ಪಡೆದಿದ್ದಾರೆ. ಧೋನಿ ನಿನ್ನೆ ರೀಜಾ ಹೆಂಡ್ರಿಕ್ಸ್ ಕ್ಯಾಚ್ ಹಿಡಿಯುವ ಮೂಲಕ ಈ ದಾಖಲೆ ಸರಿಗಟ್ಟಿದ್ದಾರೆ. 275 ಪಂದ್ಯಗಳಿಂದ ಈ ಸಾಧನೆ ಮಾಡಿದ್ದಾರೆ. ಇದನ್ನು ಹೊರತುಪಡಿಸಿದ್ರೆ ದಿನೇಶ್ ಕಾರ್ತಿಕ್ 123 ಹಾಗೂ ಪಾಕಿಸ್ತಾನದ ಕಮ್ರಾನ್ ಅಕ್ಮಲ್ 115 ಕ್ಯಾಚ್ ಪಡೆದಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...