alex Certify
ಕನ್ನಡ ದುನಿಯಾ       Mobile App
       

Kannada Duniya

ಟೀಮ್ ಇಂಡಿಯಾ ಸೋಲಿನ ಕಾರಣ ಬಿಚ್ಚಿಟ್ಟ ಧವನ್

ಜೋಹಾನ್ಸ್ ಬರ್ಗ್ ನಲ್ಲಿ ನಡೆದ ನಾಲ್ಕನೇ ಏಕದಿನ ಪಂದ್ಯದಲ್ಲಿ ದಕ್ಷಿಣ ಅಫ್ರಿಕಾ ವಿರುದ್ದ ಪರಾಭವಗೊಳ್ಳುವ ಮೂಲಕ ಟೀಮ್ ಇಂಡಿಯಾದ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಬಿದ್ದಿದೆ. 6 ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾ ಮೊದಲ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಹ್ಯಾಟ್ರಿಕ್ ಜಯ ಸಾಧಿಸಿತ್ತು.

ನಾಲ್ಕನೇ ಪಂದ್ಯದಲ್ಲಿ ದಕ್ಷಿಣ ಅಫ್ರಿಕಾ ಗೆಲುವು ಸಾಧಿಸಿದರೂ ಭಾರತೀಯ ಆಟಗಾರರು ಹಲವು ದಾಖಲೆಗಳಿಗೆ ಪಾತ್ರರಾಗಿದ್ದಾರೆ. ಭಾರತದ ಶಿಖರ್ ಧವನ್ ನೂರನೇ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿದ ಮೊದಲ ಭಾರತೀಯ ಆಟಗಾರನೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರೆ, ನಾಯಕ ವಿರಾಟ್ ಕೊಹ್ಲಿ ಕೂಡಾ ಹಲವು ದಾಖಲೆಗೆ ಭಾಜನರಾಗಿದ್ದಾರೆ.

ಈ ಮಧ್ಯೆ ನಾಲ್ಕನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಪರಾಭವದ ಕುರಿತು ಮಾತನಾಡಿರುವ ಶಿಖರ್ ಧವನ್, ಡೇವಿಡ್ ಮಿಲ್ಲರ್ 6 ರನ್ ಗಳಿಸಿದ್ದಾಗ ಕೈ ಚೆಲ್ಲಿದ ಕ್ಯಾಚ್ ಹಾಗೂ 7 ರನ್ ಗಳಿಸಿದ ಸಂದರ್ಭದಲ್ಲಿ ಹಾಕಿದ ನೋ ಬಾಲ್ ನಮಗೆ ಬಲು ದುಬಾರಿಯಾಗಿ ಪರಿಣಮಿಸಿತು ಎಂದಿದ್ದಾರೆ. ಜೊತೆಗೆ ಮಳೆ ಕೂಡಾ ದಕ್ಷಿಣ ಅಫ್ರಿಕಾ ಗೆಲುವಿಗೆ ಸಹಕಾರಿಯಾಯಿತು ಎಂದು ಶಿಖರ್ ಧವನ್ ಅಭಿಪ್ರಾಯಪಟ್ಟಿದ್ದಾರೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...