alex Certify
ಕನ್ನಡ ದುನಿಯಾ       Mobile App
       

Kannada Duniya

2ನೇ ಟೆಸ್ಟ್ ನಲ್ಲಿ ಲಂಕಾ ದಹನ ಮಾಡಿದ ಟೀಂ ಇಂಡಿಯಾ

ನಾಗ್ಪುರದಲ್ಲಿ ನಡೆದ ಶ್ರೀಲಂಕಾ ವಿರುದ್ಧದ 2ನೇ ಟೆಸ್ಟ್ ನಲ್ಲಿ ಟೀಂ ಇಂಡಿಯಾ ಐತಿಹಾಸಿಕ ಜಯ ದಾಖಲಿಸಿದೆ. ಇನ್ನಿಂಗ್ಸ್ ಹಾಗೂ 239 ರನ್ ಗಳಿಂದ ಲಂಕಾ ತಂಡವನ್ನು ಮಣಿಸಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಪಂದ್ಯದ 4ನೇ ದಿನವಾದ ಇಂದು 7 ವಿಕೆಟ್ ಕಳೆದುಕೊಂಡ ಶ್ರೀಲಂಕಾ ತಂಡ ಸುಲಭವಾಗಿ ಸೋಲೊಪ್ಪಿಕೊಂಡಿದೆ. ವಿರಾಟ್ ಕೊಹ್ಲಿ ದ್ವಿಶತಕ, ಚೇತೇಶ್ವರ್ ಪೂಜಾರಾ ಹಾಗೂ ರೋಹಿತ್ ಶರ್ಮಾರ ಭರ್ಜರಿ ಬ್ಯಾಟಿಂಗ್ ಭಾರತ ಮೊದಲ ಇನ್ನಿಂಗ್ಸ್ ನಲ್ಲೇ ಭಾರೀ ಮೊತ್ತ ಪೇರಿಸಿತ್ತು.

ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಹಾಗೂ ಇಶಾಂತ್ ಶರ್ಮಾ ಬೌಲಿಂಗ್ ನಲ್ಲಿ ಕಮಾಲ್ ಮಾಡಿದ್ದಾರೆ. ಮೊದಲ ಇನ್ನಿಂಗ್ಸ್ ನಲ್ಲಿ ಶ್ರೀಲಂಕಾ 205 ರನ್ ಗಳಿಗೆ ಆಲೌಟ್ ಆಗಿತ್ತು. ಕೊಹ್ಲಿ ಪಡೆ 6 ವಿಕೆಟ್ ನಷ್ಟಕ್ಕೆ 610 ರನ್ ಪೇರಿಸಿತ್ತು. ಈ ಮೂಲಕ 405 ರನ್ ಗಳ ಮುನ್ನಡೆ ಪಡೆದಿತ್ತು.

ಎರಡನೇ ಇನ್ನಿಂಗ್ಸ್ ನಲ್ಲಿ ಶ್ರೀಲಂಕಾ ಕೇವಲ 166 ರನ್ ಗಳಿಗೆ ಸರ್ವಪತನ ಕಂಡಿದೆ. 4 ವಿಕೆಟ್ ಪಡೆದು ಮಿಂಚಿದ ಆರ್.ಅಶ್ವಿನ್ ಟೆಸ್ಟ್ ಕ್ರಿಕೆಟ್ ನಲ್ಲಿ ಅತ್ಯಂತ ವೇಗವಾಗಿ 300 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...