alex Certify
ಕನ್ನಡ ದುನಿಯಾ       Mobile App
       

Kannada Duniya

ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ

ಭಾರತ-ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿಯ ಮೊದಲ ಎರಡು ಪಂದ್ಯಕ್ಕೆ ಭಾರತ ತಂಡ ಪ್ರಕಟವಾಗಿದೆ. ಎಂಎಸ್ಕೆ ಪ್ರಸಾದ್ ಅವರ ನೇತೃತ್ವದ ಭಾರತೀಯ ಹಿರಿಯ ಆಯ್ಕೆ ಸಮಿತಿ ಟೀಂ ಇಂಡಿಯಾ ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ. ವಿಶ್ವಕಪ್ 2019 ನ್ನು ಗಮನದಲ್ಲಿಟ್ಟುಕೊಂಡು ತಂಡವನ್ನು ಆಯ್ಕೆ ಮಾಡಲಾಗಿದೆ.

ಭಾರತ-ವೆಸ್ಟ್ ಇಂಡೀಸ್ ನಡುವೆ ನಡೆಯುವ ಮೊದಲ ಎರಡು ಏಕದಿನ ಪಂದ್ಯಗಳಲ್ಲಿ ಮಹೇಂದ್ರ ಸಿಂಗ್ ಧೋನಿ ಹಾಗೂ ರಿಷಬ್ ಪಂತ್ ಮೈದಾನಕ್ಕಿಳಿಯಲಿದ್ದಾರೆ. ಯಾರು ವಿಕೆಟ್ ಕೀಪರ್ ಜವಾಬ್ದಾರಿ ನಿರ್ವಹಿಸಲಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ತಂಡದ ನಿರ್ವಾಹಕರು ಇದನ್ನು ನಿರ್ಣಯಿಸಲಿದ್ದಾರೆ.

ದಿನೇಶ್ ಕಾರ್ತಿಕ್ ತಂಡದಲ್ಲಿ ಸ್ಥಾನ ಪಡೆದಿಲ್ಲ. ಹಾರ್ದಿಕ್ ಪಾಂಡ್ಯ ಗಾಯದಿಂದ ಹೊರಬಂದಿಲ್ಲವಾದ ಕಾರಣ ತಂಡದಿಂದ ಹೊರಗಿದ್ದಾರೆ. ವೇಗದ ಬೌಲರ್ ಖಲೀಲ್ ಅಹ್ಮದ್ ತಂಡದಲ್ಲಿ ಜಾಗ ಪಡೆಯಲು ಯಶಸ್ವಿಯಾಗಿದ್ದಾರೆ.

ತಂಡ ಹೀಗಿದೆ:

ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಶಿಖರ್ ಧವನ್, ಅಂಬಾಟಿ ರಾಯುಡು, ಮನೀಶ್ ಪಾಂಡೆ, ಮಹೇಂದ್ರ ಸಿಂಗ್ ಧೋನಿ, ರಿಷಬ್ ಪಂತ್, ರವೀಂದ್ರ ಜಡೇಜಾ, ಯಜುವೇಂದ್ರ ಚಹಲ್, ಕುಲ್ದೀಪ್ ಯಾದವ್, ಮೊಹಮದ್ ಶಮಿ, ಖಲೀಲ್ ಅಹ್ಮದ್, ಶಾರ್ದೂಲ್ ಠಾಕೂರ್, ಲೋಕೇಶ್ ರಾಹುಲ್.

ಅಕ್ಟೋಬರ್ 21 ರಂದು ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಏಕದಿನ ಪಂದ್ಯ ನಡೆಯಲಿದೆ. ಐದು ಏಕದಿನ ಪಂದ್ಯಗಳ ನಂತ್ರ ಮೂರು ಟಿ-20 ಪಂದ್ಯಗಳು ನಡೆಯಲಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...