alex Certify
ಕನ್ನಡ ದುನಿಯಾ       Mobile App
       

Kannada Duniya

1 ವರ್ಷದ ನಂತ್ರ ಲಂಡನ್ ನಲ್ಲಿ ಭಾರತ-ಪಾಕ್ ಮಧ್ಯೆ ಬಿಗ್ ಫೈಟ್

ಕ್ರಿಕೆಟ್ ಅಭಿಮಾನಿಗಳು ಎದುರು ನೋಡ್ತಿದ್ದ ಸಮಯ ಮತ್ತೆ ಬಂದಿದೆ. ಕ್ರಿಕೆಟ್ ಮೈದಾನದಲ್ಲಿ ಭಾರತ-ಪಾಕಿಸ್ತಾನ ತಂಡಗಳ ಹಣಾಹಣಿ ನೋಡುವ ಅವಕಾಶ ಕ್ರಿಕೆಟ್ ಅಭಿಮಾನಿಗಳಿಗೆ ಸಿಗ್ತಿದೆ. ಉಭಯ ದೇಶಗಳ ರಾಜಕೀಯ ಸಂಬಂಧ ಸರಿಯಿಲ್ಲದ ಕಾರಣ ಎರಡೂ ತಂಡಗಳ ಮಧ್ಯೆ ಕ್ರಿಕೆಟ್ ಪಂದ್ಯಗಳು ನಡೆಯಲಿಲ್ಲ. ಆದ್ರೆ ಏಷ್ಯಾಕಪ್ ಪಂದ್ಯಾವಳಿಯಲ್ಲಿ ಭಾರತ-ಪಾಕ್ ಮುಖಾಮುಖಿಯಾಗಲಿವೆ.

ಹಾಲಿ ಚಾಂಪಿಯನ್ ಭಾರತ ಏಷ್ಯಾಕಪ್ ಪಂದ್ಯಾವಳಿಯಲ್ಲಿ ಸೆಪ್ಟೆಂಬರ್ 19 ರಂದು ಪಾಕಿಸ್ತಾನವನ್ನು ಎದುರಿಸಲಿದೆ. ಇದಕ್ಕೆ ಒಂದು ದಿನ ಮೊದಲು ಟೀಮ್ ಇಂಡಿಯಾ ಅರ್ಹತಾ ಪಂದ್ಯವನ್ನು ಆಡಲಿದೆ. ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಅಪಘಾನಿಸ್ತಾನ ಏಷ್ಯಾ ಕಪ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವುದು ಖಚಿತವಾಗಿವೆ. ಯುಎಇ, ಸಿಂಗಾಪುರ, ಓಮನ್, ನೇಪಾಳ, ಮಲೇಷ್ಯಾ ಮತ್ತು ಹಾಂಗ್ ಕಾಂಗ್ ತಂಡಗಳಲ್ಲಿ ಯಾವ ತಂಡ ಅರ್ಹತೆ ಪಡೆಯಲಿದೆ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಎ ತಂಡದಲ್ಲಿ ಭಾರತ-ಪಾಕ್ ಇರಲಿದ್ದು, ಬಿ ತಂಡದಲ್ಲಿ ಬಾಂಗ್ಲಾದೇಶ, ಅಪಘಾನಿಸ್ತಾನ ಹಾಗೂ ಶ್ರೀಲಂಕಾ ಸ್ಥಾನಪಡೆದಿವೆ.

ಏಷ್ಯಾಕಪ್ ಪಂದ್ಯಾವಳಿಯ ಮೊದಲ ಪಂದ್ಯ ದುಬೈನಲ್ಲಿ ಸೆಪ್ಟೆಂಬರ್ 15 ರಂದು ನಡೆಯಲಿದೆ. ಫೈನಲ್ ಪಂದ್ಯ ಸೆಪ್ಟೆಂಬರ್ 25 ರಂದು ನಡೆಯಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...