alex Certify
ಕನ್ನಡ ದುನಿಯಾ       Mobile App
       

Kannada Duniya

ಮೂರನೇ ಟಿ-20: ಭಾರತದ ಮೂವರು ಪ್ರಮುಖ ಆಟಗಾರರಿಗೆ ವಿಶ್ರಾಂತಿ

ವೆಸ್ಟ್ ಇಂಡೀಸ್ ವಿರುದ್ಧ ಚೆನ್ನೈನಲ್ಲಿ ಭಾನುವಾರ ಕೊನೆಯ ಟಿ-20 ಪಂದ್ಯ ನಡೆಯಲಿದೆ. ಈ ಪಂದ್ಯದಿಂದ ವೇಗಿ ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ ಹಾಗೂ ಕುಲದೀಪ್ ಯಾದವ್ ಹೊರಬಿದ್ದಿದ್ದಾರೆ. ಈ ಮೂವರು ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಟಿ-20 ಸರಣಿ ಟೀಂ ಇಂಡಿಯಾ ವಶವಾಗಿದೆ. ಎರಡು ಪಂದ್ಯಗಳನ್ನು ಗೆದ್ದು ಬೀಗಿರುವ ಟೀಂ ಇಂಡಿಯಾ ಎರಡು ಅಂಕಗಳಿಂದ ಸರಣಿ ತನ್ನದಾಗಿಸಿಕೊಂಡಿದೆ. ಶುಕ್ರವಾರ ಬಿಸಿಸಿಐ ಪತ್ರಿಕಾ ಪ್ರಕಟಣೆಯಲ್ಲಿ ಈ ಮೂವರು ಆಟಗಾರರಿಗೆ ಕೊನೆ ಪಂದ್ಯದಲ್ಲಿ ವಿಶ್ರಾಂತಿ ನೀಡಿರುವುದಾಗಿ ತಿಳಿಸಿದೆ.

ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಟಿ-20 ಪಂದ್ಯಕ್ಕೆ ಉಮೇಶ್ ಯಾದವ್, ಬುಮ್ರಾ ಹಾಗೂ ಯಾದವ್ ಅವಶ್ಯಕತೆಯಿದೆ. ದೈಹಿಕ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ ಎಂದು ಬಿಸಿಸಿಐ ಹೇಳಿದೆ. ನವೆಂಬರ್ 21 ರಿಂದ ಆಸ್ಟ್ರೇಲಿಯಾ ಪ್ರವಾಸ ಶುರುವಾಗಲಿದೆ.

ಭಾರತ ಕ್ರಿಕೆಟ್ ಆಯ್ಕೆ ಸಮಿತಿ ವೇಗಿ ಸಿದ್ಧಾರ್ಥ್ ಕೌಲ್ ಗೆ ಕೊನೆ ಪಂದ್ಯದಲ್ಲಿ ಆಡಲು ಅವಕಾಶ ನೀಡಿದೆ. ಸರಣಿ ಈಗಾಗ್ಲೇ ಭಾರತದ ಪಾಲಾಗಿದ್ದು, ಭಾನುವಾರ ನಡೆಯಲಿರುವ ಪಂದ್ಯ  ಔಪಚಾರಿಕ ಪಂದ್ಯವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...