alex Certify
ಕನ್ನಡ ದುನಿಯಾ       Mobile App
       

Kannada Duniya

ಕಿವೀಸ್ ವಿರುದ್ಧ ಟೀಂ ಇಂಡಿಯಾಕ್ಕೆ ರೋಚಕ ಸರಣಿ ಗೆಲುವು

ನ್ಯೂಜಿಲೆಂಡ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ರೋಚಕ ಗೆಲುವು ದಾಖಲಿಸಿದೆ. ಇದರೊಂದಿಗೆ ಸರಣಿಯನ್ನೂ ಗೆದ್ದುಕೊಂಡಿದೆ. ಕಾನ್ಪುರದ ಗ್ರೀನ್ ಪಾರ್ಕ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಭಾರತ 6 ರನ್ ಗಳಿಂದ ಕಿವೀಸ್ ತಂಡವನ್ನು ಮಣಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಭರ್ಜರಿ ಶತಕದ ನೆರವಿನಿಂದ 337 ರನ್ ಗಳಿಸಿತ್ತು. ರೋಹಿತ್ ಶರ್ಮಾ 147 ರನ್ ಗಳಿಸಿ ಔಟಾದ್ರೆ, ನಾಯಕ ಕೊಹ್ಲಿ 113 ರನ್ ಬಾರಿಸಿದ್ರು. ಬೃಹತ್ ಮೊತ್ತ ಬೆನ್ನತ್ತಿದ ನ್ಯೂಜಿಲೆಂಡ್ ಆಟಗಾರರು ಕೂಡ ಅದ್ಭುತ ಬ್ಯಾಟಿಂಗ್ ಮಾಡಿದ್ದಾರೆ.

ಮನ್ರೋ 75, ಕೇನ್ ವಿಲಿಯಮ್ಸನ್ 64, ಲಾಥಮ್ 65 ಹಾಗೂ ಟೇಲರ್ 39 ರನ್ ಗಳಿಸಿದ್ರು. ಆದ್ರೆ ಜಸ್ಪ್ರೀತ್ ಬುಮ್ರಾ ಹಾಗೂ ಯಜುವೇಂದ್ರ ಚಹಲ್ ತಮ್ಮ ಅದ್ಭುತ ಬೌಲಿಂಗ್ ಮೂಲಕ ಕಿವೀಸ್ ಪಡೆಯನ್ನು ಕಟ್ಟಿಹಾಕಿದ್ದಾರೆ. ಬುಮ್ರಾ 3 ಹಾಗೂ ಚಹಲ್ ಎರಡು ವಿಕೆಟ್ ಪಡೆದಿದ್ದಾರೆ.

ಕೊನೆಯ 2 ಓವರ್ ಗಳಲ್ಲಿ 25 ರನ್ ಗಳಿಸಬೇಕಿದ್ದ ನ್ಯೂಜಿಲೆಂಡ್ 7 ವಿಕೆಟ್ ಕಳೆದುಕೊಂಡು 331 ರನ್ ಗಳಿಸಲಷ್ಟೇ ಶಕ್ತವಾಯ್ತು. ಇದರೊಂದಿಗೆ ಏಕದಿನ ಸರಣಿ ಕೊಹ್ಲಿ ಪಡೆಯ ಪಾಲಾಗಿದೆ.

 

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...