alex Certify
ಕನ್ನಡ ದುನಿಯಾ       Mobile App
       

Kannada Duniya

ಟೆನಿಸ್ ಆಟಗಾರ್ತಿಯೊಂದಿಗೆ ಸಪ್ತಪದಿ ತುಳಿದ ಕ್ರಿಕೆಟಿಗ

uthappa

ಭಾರತದಲ್ಲಿ ಕ್ರಿಕೆಟ್ ಗೆ ಹೆಚ್ಚಿನ ಆದ್ಯತೆ ಇದ್ದೇ ಇದೆ. ಅದರಲ್ಲಿಯೂ ಹೊಡಿ ಬಡಿ ಆಟಗಾರರಿಗೆ ಹೆಚ್ಚಿನ ಪ್ರೋತ್ಸಾಹ ಸಿಗುತ್ತದೆ. ಸ್ಪೋಟಕ ಬ್ಯಾಟ್ಸ್ ಮನ್ ಗಳಿಗೆ ಪ್ರೇಕ್ಷಕರ ಬೆಂಬಲ ಜಾಸ್ತಿ ಎಂಬುದನ್ನು ಬೇರೆ ಹೇಳಬೇಕಿಲ್ಲ. ಇಂತಹ ಬೆಂಬಲ ಹೊಂದಿದ ಸ್ಪೋಟಕ ಬ್ಯಾಟ್ಸ್ ಮನ್ ಒಬ್ಬರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಖ್ಯಾತ ಕ್ರಿಕೆಟ್ ಆಟಗಾರ ರಾಬಿನ್ ಉತ್ತಪ್ಪ ಅವರು ಮಾಜಿ ಟೆನಿಸ್ ಆಟಗಾರ್ತಿ ಶೀತಲ್ ಅವರೊಂದಿಗೆ ಸಪ್ತಪದಿ ತುಳಿದಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ನಡೆದ ಸಮಾರಂಭದಲ್ಲಿ ರಾಬಿನ್ ಉತ್ತಪ್ಪ ಅವರು ತಮ್ಮ ಬಹುದಿನಗಳ ಗೆಳತಿಯಾಗಿರುವ ಶೀತಲ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಬಂಧುಗಳು, ಆಪ್ತೇಷ್ಟರ ಸಮ್ಮುಖದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ರಾಬಿನ್ ಉತ್ತಪ್ಪ ಹಾಗೂ ಶೀತಲ್ ಸತಿಪತಿಗಳಾದರು.

ಕಳೆದ ವರ್ಷದ ಕೊನೆಯಲ್ಲಿ ಉತ್ತಪ್ಪ ಹಾಗೂ ಶೀತಲ್ ಅವರು ಮಾರಿಷಸ್ ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಈ ಸಾಲಿನ ರಣಜಿ ಟೂರ್ನಿಯಲ್ಲಿ ರಾಬಿನ್ ಹ್ಯಾಟ್ರಿಕ್ ಶತಕ ಬಾರಿಸಿದ್ದರು. ಶೀತಲ್ ಅವರು ರಾಷ್ಟ್ರೀಯ ಟೆನಿಸ್ ಟೂರ್ನಿಗಳಲ್ಲಿ ಆಟವಾಡಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...