alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಮಾಣವಚನಕ್ಕೂ ಮುನ್ನ ಇಮ್ರಾನ್ ಖಾನ್ ಗೆ ಸಿಕ್ತು ಸ್ಪೆಷಲ್ ‘ಗಿಫ್ಟ್’

ಪಾಕಿಸ್ತಾನದ ಪ್ರಧಾನಿಯಾಗಿ ಪದಗ್ರಹಣ ಮಾಡಲಿರುವ ಪಾಕಿಸ್ತಾನದ ತೆಹ್ರಿಕ್ -ಇ – ಇನ್ಸಾಫ್ ಪಕ್ಷದ ಅಧ್ಯಕ್ಷ ಇಮ್ರಾನ್ ಖಾನ್ ಅವರನ್ನ, ಇಸ್ಲಾಮಾಬಾದ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಸಿಬ್ಬಂದಿ ಶುಕ್ರವಾರ ಭೇಟಿಯಾಗಿದ್ದಾರೆ.

ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಮುನ್ನ ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಅಜಯ್ ಬಿಸಾರಿಯಾ ಮತ್ತು ರಾಯಭಾರ ಕಚೇರಿಯ ಸಿಬ್ಬಂದಿ ಇಮ್ರಾನ್ ಖಾನ್ ರನ್ನ ಭೇಟಿಯಾಗಿ ಶುಭಾಶಯ ಕೋರಿದ್ದಾರೆ.

ಈ ವೇಳೆ ಭಾರತದ ಪರವಾಗಿ ವಿಶೇಷ ಉಡುಗೊರೆಯೊಂದನ್ನೂ ರಾಯಭಾರಿ ಅಜಯ್ ಬಿಸಾರಿಯಾ ನೀಡಿದ್ದಾರೆ. ಟೀಮ್ ಇಂಡಿಯಾದ ಎಲ್ಲಾ ಆಟಗಾರರು ಸಹಿ ಮಾಡಿರುವ ಬ್ಯಾಟನ್ನ ಭಾವಿ ಪಾಕಿಸ್ತಾನದ ಪ್ರಧಾನಿಗಳಿಗೆ ಉಡುಗೊರೆಯಾಗಿ ನೀಡಿದ್ದಾರೆ.

ಆಗಸ್ಟ್ 18ರಂದು ಇಮ್ರಾನ್ ಖಾನ್ ಪ್ರಮಾಣವಚನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರರಾದ ಕಪಿಲ್ ದೇವ್, ನವಜೋತ್ ಸಿಂಗ್ ಸಿಧು ಹಾಗೂ ಸುನೀಲ್ ಗವಾಸ್ಕರ್ ರನ್ನು ಈ ಕಾರ್ಯಕ್ರಮದಲ್ಲಿ ಭಾಗವಹಿಸೋಕೆ ಇಮ್ರಾನ್ ಆಹ್ವಾನಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...