alex Certify
ಕನ್ನಡ ದುನಿಯಾ       Mobile App
       

Kannada Duniya

ಟೀಂ ಇಂಡಿಯಾ ಆಟಗಾರರ ಪಟ್ಟಿ ಪ್ರಕಟ

bcciಮುಂಬರುವ ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು, ಟೀಮ್ ಇಂಡಿಯಾ ಆಯ್ಕೆ ಸಮಿತಿ ಅಧ್ಯಕ್ಷ ಎಂ.ಎಸ್.ಕೆ. ಪ್ರಸಾದ್ ಇಂದು ಪಟ್ಟಿ ಪ್ರಕಟಿಸಿದ್ದಾರೆ.

ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ಇಂದು ಆಟಗಾರರ ಹೆಸರನ್ನು ಪ್ರಕಟಿಸಲಾಗಿದ್ದು, ರಣಜಿ ಟ್ರೋಫಿಯಲ್ಲಿ ತಮ್ಮ ಬ್ಯಾಟಿಂಗ್ ಸಾಮರ್ಥ್ಯ ಪ್ರದರ್ಶಿಸಿದ್ದ ಯುವರಾಜ್ ಸಿಂಗ್ ಸ್ಥಾನ ಗಿಟ್ಟಿಸಿಕೊಳ್ಳಲು ವಿಫಲರಾಗಿರುವುದು ಅಚ್ಚರಿ ಮೂಡಿಸಿದೆ.

ತಂಡ ಇಂತಿದ್ದು, ವಿರಾಟ್ ಕೊಹ್ಲಿ, ಚೇತೇಶ್ವರ್ ಪೂಜಾರ, ಉಮೇಶ್ ಯಾದವ್, ಜಯಂತ್ ಯಾದವ್, ಗೌತಮ್ ಗಂಭೀರ್, ಮುರಳಿ ವಿಜಯ್, ವೃದ್ದಿಮಾನ್ ಸಹಾ, ಅಜಿಂಕ್ಯಾ ರಹಾನೆ, ಮಹಮ್ಮದ್ ಶಮಿ, ಅಮಿತ್ ಮಿಶ್ರಾ, ಕರಣ್ ನಾಯರ್, ಆರ್. ಅಶ್ವಿನ್, ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯ, ಇಶಾಂತ್ ಶರ್ಮಾ ಸ್ಥಾನ ಪಡೆದುಕೊಂಡಿದ್ದಾರೆ.

ನವೆಂಬರ್ 9 ರಿಂದ ಭಾರತ, ಇಂಗ್ಲೆಂಡ್ ವಿರುದ್ಧ ಐದು ಟೆಸ್ಟ್ ಪಂದ್ಯಗಳನ್ನಾಡಲಿದ್ದು, ಟೆಸ್ಟ್ ಪಂದ್ಯದ ಜೊತೆ ಮೂರು ಏಕದಿನ ಸರಣಿ ಹಾಗೂ ಎರಡು 20-20 ಪಂದ್ಯಗಳನ್ನಾಡಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...