alex Certify
ಕನ್ನಡ ದುನಿಯಾ       Mobile App
       

Kannada Duniya

ಮಹಿಳಾ ಕ್ರಿಕೆಟ್ ತಂಡದ ಕೋಚ್ ಆಯ್ಕೆಗೆ ನಡೆಯುತ್ತಿದೆ ಸಂದರ್ಶನ

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಕೋಚ್ ಆಯ್ಕೆ ಆಗಸ್ಟ್ 10 ರಂದು ಮುಂಬೈನಲ್ಲಿ ನಡೆಯುತ್ತಿದೆ. ಮಹಿಳಾ ಕ್ರಿಕೆಟ್ ತಂಡದ ಕೋಚ್ ಹುದ್ದೆಗೆ 20 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಭಾರತದ ಮಾಜಿ ಸ್ಪಿನ್ನರ್ ಸುನಿಲ್ ಜೋಷಿ, ರಮೇಶ್ ಪವಾರ್, ನ್ಯೂಜಿಲ್ಯಾಂಡ್ ನ ಮಾಜಿ ಆಟಗಾರರೂ ಅರ್ಜಿ ಸಲ್ಲಿಸಿದ್ದಾರೆ.

ಭಾರತದ ಮಾಜಿ ವಿಕೆಟ್ ಕೀಪರ್ ಅಜಯ್ ರತ್ರಾ, ವಿಜಯ್ ಯಾದವ್ ಹಾಗೂ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಮಮತಾ ಮಾಬೆನ್ ಮತ್ತು ಸುಮನ್ ಶರ್ಮಾ ಸಂದರ್ಶನ ನಡೆಸಲಿದ್ದಾರೆ. ಸುಮನ್ ಶರ್ಮಾ ಸಹಾಯಕ ಕೋಚ್ ಆಗಿ ಕೆಲಸ ಮಾಡಿದ್ದಾರೆ. ಪೂರ್ಣಿಮಾ ರಾವ್ ತಂಡದ ತರಬೇತುದಾರರಾಗಿದ್ದಾರೆ.

ಜೋಷಿ ಹಾಗೂ ಪವಾರ್ ಮಧ್ಯೆ ಸ್ಪರ್ಧೆಯಿದೆ. ಪವಾರ್ 2 ಟೆಸ್ಟ್ ಹಾಗೂ 31 ಏಕದಿನ ಪಂದ್ಯಗಳನ್ನಾಡಿದ್ದಾರೆ. ಆಟಗಾರ ಹಾಗೂ ತರಬೇತುದಾರರಾಗಿ ಜೋಷಿಯವರನ್ನು ನಿರ್ಲಕ್ಷಿಸುವುದು ಕಷ್ಟ. ಎಡಗೈ ಸ್ಪಿನ್ನರ್ 15 ಟೆಸ್ಟ್ ಹಾಗೂ 69 ಏಕದಿನ ಪಂದ್ಯಗಳನ್ನಾಡಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...