alex Certify
ಕನ್ನಡ ದುನಿಯಾ       Mobile App
       

Kannada Duniya

ಐ.ಪಿ.ಎಲ್. ಆರಂಭಕ್ಕೂ ಮೊದಲೇ ಡೆಲ್ಲಿ ತಂಡಕ್ಕೆ ಬಿಗ್ ಶಾಕ್…!

ಇಂಡಿಯನ್ ಪ್ರೀಮಿಯರ್ ಲೀಗ್(ಐ.ಪಿ.ಎಲ್.) ಆರಂಭಕ್ಕೆ ಕ್ಷಣಗಣನೆ ಶುರುವಾಗಿರುವಂತೆಯೇ, ಡೆಲ್ಲಿ ಡೇರ್ ಡೆವಿಲ್ಸ್ ತಂಡಕ್ಕೆ ಆಘಾತ ಎದುರಾಗಿದೆ.

ದಕ್ಷಿಣ ಆಫ್ರಿಕಾ ತಂಡದ ವೇಗದ ಬೌಲರ್ ಕಗಿಸೊ ರಬಾಡ ಬೆನ್ನು ನೋವಿನ ಕಾರಣದಿಂದ, ಐ.ಪಿ.ಎಲ್.ನಿಂದ ದೂರ ಉಳಿಯಲಿದ್ದಾರೆ. ಡೆಲ್ಲಿ ಡೇರ್ ಡೆವಿಲ್ಸ್ ತಂಡವನ್ನು ಸೇರಿಕೊಳ್ಳಬೇಕಿದ್ದ ಕಗಿಸೊ ರಬಾಡ ಬೆನ್ನು ನೋವಿನ ತೊಂದರೆಯಿಂದ ಬಳಲುತ್ತಿದ್ದು, 3 ತಿಂಗಳ ಕಾಲ ವಿಶ್ರಾಂತಿ ಪಡೆಯಬೇಕಿದೆ.

ಇತ್ತೀಚೆಗಷ್ಟೇ ನಡೆದಿದ್ದ ಐ.ಪಿ.ಎಲ್. ಹರಾಜಿನಲ್ಲಿ 4.2 ಕೋಟಿ ರೂ. ನೀಡಿ ಕಗಿಸೊ ರಬಾಡ ಅವರನ್ನು ಖರೀದಿಸಿದ್ದ ಡೆಲ್ಲಿ ತಂಡಕ್ಕೆ ಆಘಾತವಾದಂತಾಗಿದೆ. ಆಸ್ಟ್ರೇಲಿಯಾ ವಿರುದ್ಧ ನಡೆದ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 23 ವಿಕೆಟ್ ಗಳನ್ನು ಗಳಿಸಿದ್ದ ಕಗಿಸೊ ರಬಾಡ ಅತ್ಯುತ್ತಮ ಪ್ರದರ್ಶನ ನೀಡಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...